ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಕಾರ್ಖಾನೆಗೆ ಭೇಟಿ ನೀಡಿದ ನಂತರ ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಶ್ರೀ HD ಕುಮಾರಸ್ವಾಮಿ ಅವರು ಶಿವಮೊಗ್ಗದಲ್ಲಿ ಮಾಜಿ ಮುಖ್ಯಮಂತ್ರಿಗಳು, ಬಿಜೆಪಿ ಸಂಸದೀಯ ಮಂಡಳಿ ಸದಸ್ಯರಾದ ಶ್ರೀ ಯಡಿಯೂರಪ್ಪ ಅವರ ನಿವಾಸಕ್ಕೆ ಭೇಟಿ ನೀಡಿದರು.
ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ಬಿ.ವೈ.ವಿಜಯೇಂದ್ರ, ಸಂಸದರಾದ ಶ್ರೀ ಬಿ.ವೈ. ರಾಘವೇಂದ್ರ, ಮಾಜಿ ಸಚಿವರಾದ ಶ್ರೀ ಸಾ.ರಾ.ಮಹೇಶ್, ವಿಧಾನ ಪರಿಷತ್ ಸದಸ್ಯರಾದ ಶ್ರೀ ಭೋಜೇಗೌಡರು, ಶಾಸಕರಾದ ಶ್ರೀಮತಿ ಶಾರದಾ ಪೂರ್ಯ ನಾಯಕ್ ಅವರು ಉಪಸ್ಥಿತರಿದ್ದರು.