ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗದಿಂದ ಬಂಡಾಯವಾಗಿ ಸ್ವರ್ಧಿಸಿ ಮುಖಭಂಗ ಅನುಭವಿಸಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು, ನನಗೆ ತುರ್ತಾಗಿ ಬಿಜೆಪಿ ಸೇರುವ ಚಿಂತನೆ ಇಲ್ಲ ಎಂಬ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಶಿವಮೊಗ್ಗದಲ್ಲಿ ಮಾತನಾಡಿದ ಕೆ.ಎಸ್. ಈಶ್ವರಪ್ಪ, ನನಗೆ ಈಗಲೇ ಬಿಜೆಪಿ ಸೇರುವ ಯೋಚನೆ ಇಲ್ಲ, ರಾಯಣ್ಣ ಬ್ರಿಗೇಡ್ ಮರು ಚಾಲನೆಗೆ ಬಗ್ಗೆ ಶೀಘ್ರದಲ್ಲೇ ನಿರ್ಧಾರ ಮಾಡಲಿದ್ದೇವೆ ಎಂದು ಹೇಳಿದ್ದಾರೆ. ರಾಯಣ್ಣ ಬ್ರಿಗೇಡ್ ಮೂಲಕ ಶಿವಮೊಗ್ಗ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಂಘಟನೆಗೆ ಕೆ.ಎಸ್. ಈಶ್ವರಪ್ಪ ಪ್ಲಾನ್ ಮಾಡುತ್ತಿದ್ದಾರೆ ಎನ್ನಲಾಗಿದೆ.