ಶಿವಮೊಗ್ಗ : ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರು 400 ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ್ದಾರೆ. ಅವರ ಪರ ಮತಯಾಸಿದ್ದಕ್ಕಾಗಿ ಪ್ರಧಾನಿ ಮೋದಿ ಕ್ಷಮೆಯಾಚಿಸಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.
ಶಿವಮೊಗ್ಗದಲ್ಲಿ ಚುನಾವಣಾ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ಪ್ರಜ್ವಲ್ ಪರ ಪ್ರಧಾನಿ ಮತಯಾಚಿಸಿದ್ದು, ದೇಶದ ಮಹಿಳೆಯರಲ್ಲಿ ಕ್ಷಮೆಯಾಚಿಸಬೇಕು ಎಂದು ಹೇಳಿದ್ದಾರೆ. ಇದು ಕೇವಲ ಲೈಂಗಿಕ ಹಗರಣವಲ್ಲ ಬದಲಾಗಿ ಸಾಮೂಹಿಕ ಅತ್ಯಾಚಾರ ಪ್ರಕರಣವಾಗಿದೆ. ಹಾಸನದ ಎನ್ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ 400 ಮಹಿಳೆಯರ ಮೇಲೆ ಅತ್ಯಾಚಾರ ಎಸಗಿ ವಿಡಿಯೋ ಮಾಡಿದ್ದಾನೆ ಎಂದು ಆರೋಪಿಸಿದರು.
ಸಾಮೂಹಿಕ ಅತ್ಯಾಚಾರಿಯನ್ನು ಬೆಂಬಲಿಸಿ ಪ್ರಧಾನಿ ಮೋದಿ ಪ್ರಚಾರ ಮಾಡಿದರು. ಈ ಅತ್ಯಾಚಾರಿಗೆ ಮತ ನೀಡಿದರೆ ಅದು ನನಗೂ ನೆರವಾಗುತ್ತದೆ ಎಂದು ರಾಜ್ಯ ಜನತೆಯ ಮುಂದೆ ಹೇಳಿದರು. ಪ್ರಧಾನಿ ದೇಶದ ತಾಯಂದಿರು, ಸಹೋದರಿಯರಲ್ಲಿ ಕ್ಷಮೆಯಾಚಿಸಬೇಕು ಎಂದು ರಾಹುಲ್ ಹೇಳಿದ್ದಾರೆ.