ತಮಿಳುನಾಡಿನಲ್ಲಿ ತರಬೇತಿ ಪಡೆಯುತ್ತಾರೆ, ಕರ್ನಾಟಕಕ್ಕೆ ಬಂದು ಬಾಂಬ್ ಇಡುತ್ತಾರೆ ಎಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದರು. ಈ ಹೇಳಿಕೆಯ ಸಂಬಂಧ ತಮಿಳುನಾಡಿನಲ್ಲಿ ಶೋಭಾ ಕರಂದ್ಲಾಜೆ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಟ್ಟವರು ತಮಿಳುನಾಡಿನಲ್ಲಿ ತರಬೇತಿ ಪಡೆದಿದ್ದಾರೆ” ಎಂಬ ನಿಮ್ಮ ಹೇಳಿಕೆಗೆ ಏನು ಆಧಾರವಿದೆ ಎಂದು ಮದ್ರಾಸ್ ಹೈಕೋರ್ಟ್ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಪ್ರಶ್ನಿಸಿದೆ.
ಈ ಹೇಳಿಕೆಯು ತಮಿಳುನಾಡಿನವರನ್ನು ಅವಮಾನಿಸುವಂತಹದ್ದು ಎಂಬ ಆಕ್ಷೇಪ ವ್ಯಕ್ತವಾಗಿತ್ತು. ಈ ಸಂಬಂಧ ಸಿ.ತ್ಯಾಗರಾಜನ್ ಎಂಬುವರು ಮಾರ್ಚ್ 20 ರಂದು ಮಧುರೈನ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಶೋಭಾ ಕರಂದ್ಲಾಜೆ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ತಮ್ಮ ವಿರುದ್ಧ ದಾಖಲಿಸಿರುವ ಎಫ್ಐಆರ್ ರದ್ದುಗೊಳಿಸುವಂತೆ ಶೋಭಾ ಕರಂದ್ಲಾಜೆ ಅವರು ಅರ್ಜಿ ಸಲ್ಲಿಸಿದರು. ಅರ್ಜಿ ವಿಚಾರಣೆ ವೇಳೆ ನ್ಯಾಯಮೂರ್ತಿ ಜಿ.ಜಯಚಂದ್ರನ್ ಈ ಪ್ರಶ್ನೆಯನ್ನು ಕೇಳಿದರು.