ಮನುಷ್ಯರು ಅಸ್ತಿತ್ವ ಕಳೆದುಕೊಂಡು ರಸ್ತೆಯಲ್ಲಿ ಬಿದ್ದು ಸಾಯುತ್ತಾರೆ ಎಂದು ಕೋಡಿಮಠದ ಡಾ. ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಶಾಕಿಂಗ್ ಭವಿಷ್ಯ ನುಡಿದಿದ್ದಾರೆ. ಹಲವಾರು ರಾಷ್ಟ್ರಗಳು ಪ್ರಳಯದ ಕಾರಣದಿಂದ ಮುಳುಗಿ ಹೋಗಿ ತನ್ನ ಅಸ್ತಿತ್ವವನ್ನು ಕಳೆದುಕೊಳ್ಳಲಿದೆ. ಇತ್ತ ರೈತರಿಗೆ ಈ ಮಳೆಯ ಕಾರಣದಿಂದ ನಷ್ಟಗಳು ಕೂಡ ಸಂಭವಿಸಲಿದೆ, ಮತ್ತೆ ಮನುಷ್ಯರು ಅಸ್ತಿತ್ವ ಕಳೆದುಕೊಂಡು ರಸ್ತೆಯಲ್ಲಿ ಬಿದ್ದು ಸಾಯುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ.
ಈ ವರ್ಷ ಬಿಸಿಯಾದ ಜಾಗ ಪ್ರಳಯ ಆಗುತ್ತದೆ, ತಂಪಾಗಿರುವ ಜಾಗವೆಲ್ಲ ಬಿಸಿ ಆಗಿ ಬರಗಾಲ ಅನುಭವಿಸುತ್ತದೆ. ಕರ್ನಾಟಕ ಈ ಸಮಸ್ಯೆಯಿಂದ ತಪ್ಪಿಸಿಕೊಳ್ಳಲು ಅಧಿಕಾರದಲ್ಲಿ ಇರುವವರು ಮುಂಜಾಗ್ರತೆ ಕ್ರಮ ತೆಗೆದುಕೊಂಡರೆ ಈ ಎಲ್ಲಾ ಸಮಸ್ಯೆಯಿಂದ ಪಾರಾಗಬಹುದು ಎಂದು ಹೇಳಿದ್ದಾರೆ.