ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಆಯೋಜಿಸಲಾಗಿದ್ದ ಮಾಜಿ ಮುಖ್ಯಮಂತ್ರಿ ದಿವಂಗತ ಡಿ.ದೇವರಾಜ ಅರಸು ಅವರ 109 ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಂಡಿದ್ದು, ಹೊಸ ಘೋಷಣೆಗಳನ್ನೇ ಮಾಡಿದ್ದಾರೆ.
ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಗೆ ದೇವರಾಜ ಅರಸು ಎಲೆಕ್ಟ್ರಾನಿಕ್ ಸಿಟಿ ಎಂದು ಮರುನಾಮಕರಣ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದರು.ದೇವರಾಜ ಅರಸು ಅವರಿಗೆ ಮರಣೋತ್ತರ ಭಾರತ ರತ್ನ ನೀಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು. ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಭೂಸುಧಾರಣೆ ಕಾಯ್ದೆಯನ್ನು ವಿಧಾನಪರಿಷತ್ನಲ್ಲಿ ಬಹುಮತ ಸಿಕ್ಕಾಗ ಭೂಸುಧಾರಣೆ ಕಾಯ್ದೆಗೆ ತಿದ್ದುಪಡಿ ಮಾಡುತ್ತೇನೆ. 98ಎ, ಬಿ ಸೆಕ್ಷನ್ಗಳನ್ನು ತಿದ್ದುಪಡಿ ಮಾಡಿದ್ದನ್ನು ರದ್ದುಪಡಿಸಲಾಗುವುದು. ಅಪ್ಪರ್ ಹೌಸ್ ನಲ್ಲಿ ಮೆಜಾರಿಟಿ ಬರಲಿ ಎಂದು ಕಾಯುತ್ತಿದ್ದೇನೆ. ಅವರ ತಿದ್ದುಪಡಿಯನ್ನು ಬದಲಾವಣೆ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದರು.