ಸಿಎಂ ಸಿದ್ದರಾಮಯ್ಯ ಹೈಕೋರ್ಟ್ ಬಿಗ್ ಶಾಕ್ ಕೊಟ್ಟಿದೆ. ರಾಜ್ಯಪಾಲರ ನಿರ್ಧಾರವನ್ನ ಹೈಕೋರ್ಟ್ ಎತ್ತಿಹಿಡಿದಿದೆ. “ಸಿಎಂ ವಿರುದ್ಧ ಪ್ರಾಸಿಕ್ಯೂಷನ್ಗೆ ಗವರ್ನರ್ ನಿರ್ಧಾರ ಸರಿ” ಎಂದು ಹೈಕೋರ್ಟ್ ಹೇಳಿದೆ. ಹೈಕೋರ್ಟ್ನ ಏಕಸದಸ್ಯ ಪೀಠದಿಂದ ಮಹತ್ವದ ತೀರ್ಪು ಹೊರಬಿದ್ದಿದೆ. ನ್ಯಾ. ನಾಗಪ್ರಸನ್ನ ಅವರು ಮಹತ್ವದ ತೀರ್ಪು ನೀಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಸಲ್ಲಿಸಿದ ರಿಟ್ ಅರ್ಜಿ ವಜಾ ಆಗಿದೆ. ಸಿದ್ದರಾಮಯ್ಯ ಅರ್ಜಿ ವಜಾಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದನ್ನ ಪ್ರಶ್ನಿಸಿ ರಿಟ್ ಅರ್ಜಿ ಸಲ್ಲಿಸಿದ್ದರು ಸಿಎಂ ಸಿದ್ದರಾಮಯ್ಯನವರು. ಆದರೆ ಸಿಎಂ ಸಲ್ಲಿಸಿದ್ದ ರಿಟ್ ಅರ್ಜಿ ವಜಾಗೊಳಿಸಿ ಸಿಎಂ ವಿರುದ್ಧ ತನಿಖೆಗೆ ಗ್ರೀನ್ ಸಿಗ್ನಲ್ ಕೊಟ್ಟಿದೆ ಹೈಕೋರ್ಟ್.