ಲೋಕಸಭೆ ಚುನಾವಣೆಯಲ್ಲಿ ನಾಲ್ಕನೆ ಬಾರಿ ಗೆಲುವು ಸಾಧಿಸಿರುವ ಬಿ.ವೈ.ರಾಘವೇಂದ್ರ ಕೇಂದ್ರ ಸಚಿವರಾಗಲಿ ಎಂದು ಪೂಜೆ ಸಲ್ಲಿಸಲಾಗಿದೆ. ಸೊರಬ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಚಂದ್ರಗುತ್ತಿಯ ಶ್ರೀ ರೇಣುಕಾಂಬ ದೇವಿಯ ದೇಗುಲದಲ್ಲಿ ಪೂಜೆ ಸಲ್ಲಿಸಿದ್ದಾರೆ.
ಬಿ.ವೈ.ರಾಘವೇಂದ್ರ ಅವರಿಗೆ ನರೇಂದ್ರ ಮೋದಿ ಅವರ ಸಂಪುಟದಲ್ಲಿ ವಿಮಾನಯಾನ ಅಥವಾ ರೈಲ್ವೆ ಖಾತೆ ದೊರೆಯಲಿ ಎಂದು ಪೂಜೆ ಸಲ್ಲಿಸಲಾಯಿತು. ಯುವ ಮೋರ್ಚಾ ತಾಲೂಕು ಅಧ್ಯಕ್ಷ ರಾಜು ಮಾವಿನಬಳ್ಳಿಕೊಪ್ಪ, ಜಿಲ್ಲಾ ಕಾರ್ಯದರ್ಶಿ ಆಶೀಕ್ ನಾಗಪ್ಪ, ಗೋ ಸಂರಕ್ಷಣ ಹೋರಾಟ ಸಮಿತಿ ಅಧ್ಯಕ್ಷ ಚಿದಾನಂದಗೌಡ, ಪ್ರಮುಖರಾದ ಗುರುಮೂರ್ತಿ ದೇವತಿಕೊಪ್ಪ, ಸೇರಿದಂತೆ ಹಲವರು ಇದ್ದರು.