ಭಾರತ ಮತ್ತು ಜಿಂಬಾಬ್ವೆ ನಡುವಿನ 5 ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ಇಂದು ಹರಾರೆಯಲ್ಲಿ ಆರಂಭವಾಗಿದೆ. ಟಿ20 ವಿಶ್ವಕಪ್ ಗೆದ್ದ ಒಂದು ವಾರದ ನಂತರ ಭಾರತ ತಂಡ ಮೊದಲ ಬಾರಿಗೆ ಮೈದಾನಕ್ಕಿಳಿಯುತ್ತಿದೆ. ಈ ಪಂದ್ಯದ ಟಾಸ್ ಮುಗಿದಿದ್ದು ಟಾಸ್ ಗೆದ್ದ ಶುಭ್ಮನ್ ಗಿಲ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಇದರೊಂದಿಗೆ ಎರಡು ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದೆ.
ಭಾರತ ಮತ್ತು ಜಿಂಬಾಬ್ವೆ ನಡುವಿನ 5 ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ಇಂದು ಹರಾರೆಯಲ್ಲಿ ಆರಂಭವಾಗಿದೆ. ಟಿ20 ವಿಶ್ವಕಪ್ ಗೆದ್ದ ಒಂದು ವಾರದ ನಂತರ ಭಾರತ ತಂಡ ಮೊದಲ ಬಾರಿಗೆ ಮೈದಾನಕ್ಕಿಳಿಯುತ್ತಿದೆ. ಈ ತಂಡದಲ್ಲಿ ಟಿ20 ವಿಶ್ವ ಚಾಂಪಿಯನ್ ತಂಡದ ಸದಸ್ಯರಿಲ್ಲದಿದ್ದರೂ ಅದರಲ್ಲಿ ಸೇರಿರುವ ಹಲವು ಯುವ ಆಟಗಾರರು ತಂಡದ ಪರ ಕಣಕ್ಕಿಳಿಯಲ್ಲಿದ್ದಾರೆ. ಶುಭ್ಮನ್ ಗಿಲ್ ಚೊಚ್ಚಲ ಬಾರಿಗೆ ಟೀಂ ಇಂಡಿಯಾ ನಾಯಕತ್ವ ವಹಿಸಿದ್ದಾರೆ. ಅಂತಹ ಪರಿಸ್ಥಿತಿಯಲ್ಲಿ ಚೊಚ್ಚಲ ನಾಯಕತ್ವದಲ್ಲಿ ಗೆಲುವಿನ ಶುಭಾರಂಭ ಮಾಡುವ ಇರಾದೆಯಲ್ಲಿ ಗಿಲ್ ಅಖಾಡಕ್ಕಿಳಿಯುತ್ತಿದ್ದಾರೆ. ಇನ್ನು ಈ ಪಂದ್ಯದ ಟಾಸ್ ಮುಗಿದಿದ್ದು ಟಾಸ್ ಗೆದ್ದ ಶುಭ್ಮನ್ ಗಿಲ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಇದರೊಂದಿಗೆ ಎರಡು ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದೆ.
ಶುಭಮನ್ ಗಿಲ್ ನಾಯಕತ್ವದಲ್ಲಿ ಯುವ ತಂಡ ಆಡುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಮೂವರು ಆಟಗಾರರು ಸರಣಿಯ ಮೊದಲ ಪಂದ್ಯದಲ್ಲೇ ಟಿ20ಐಗೆ ಪದಾರ್ಪಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂವರು ಆಟಗಾರರು ಅಭಿಷೇಕ್ ಶರ್ಮಾ, ಧ್ರುವ್ ಜುರೆಲ್ ಮತ್ತು ರಿಯಾನ್ ಪರಾಗ್. ಇದು ಅಭಿಷೇಕ್ ಶರ್ಮಾ ಮತ್ತು ರಿಯಾನ್ ಪರಾಗ್ ಅವರ ಮೊದಲ ಅಂತಾರಾಷ್ಟ್ರೀಯ ಪಂದ್ಯವಾಗಿದ್ದರೆ, ಧ್ರುವ್ ಜುರೆಲ್ ಅವರ ಚೊಚ್ಚಲ ಅಂತಾರಾಷ್ಟ್ರೀಯ ಟಿ20 ಪಂದ್ಯವಾಗಿದೆ. ಜುರೆಲ್ ಈಗಾಗಲೇ ಟೀಂ ಇಂಡಿಯಾ ಪರ ಟೆಸ್ಟ್ಗೆ ಪದಾರ್ಪಣೆ ಮಾಡಿದ್ದಾರೆ. ಈ ಮೂವರು ಆಟಗಾರರು ತಮ್ಮ ಚೊಚ್ಚಲ ಪ್ರದರ್ಶನವನ್ನು ಸ್ಮರಣೀಯವಾಗಿಸುವತ್ತ ಗಮನಹರಿಸಲಿದ್ದಾರೆ.