ಭಾರತ ಮತ್ತು ಜಿಂಬಾಬೈ ನಡುವಿನ ಮಹತ್ವದ ಮೂರನೇ ಪಂದ್ಯದಲ್ಲಿ 23 ರನ್ಗಳಿಂದ ಗೆಲುವು ದಾಖಲಿಸಿ ಐದು ಪಂದ್ಯಗಳ ಟಿ-20 ಸರಣಿಯಲ್ಲಿ ಭಾರತವು 2- 1ರಿಂದ ಮುನ್ನಡೆ ಸಾಧಿಸಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ನಾಯಕ ಶುಭ್ಮನ್ ಗಿಲ್ ನೇತೃತ್ವದ ಭಾರತ ತಂಡ ನಿಗದಿತ 20 ಓವರ್ನಲ್ಲಿ 4 ವಿಕೆಟ್ ನಷ್ಟಕ್ಕೆ 182 ರನ್ಗಳ ಪೇರಿಸಿದರೆ, ಜಿಂಬಾಬೈ ತಂಡವು 20 ಓವರ್ನಲ್ಲಿ 6 ವಿಕೆಟ್ ನಷ್ಟಕ್ಕೆ 159 ರನ್ ಗಳಿಸಲಷ್ಟೇ ಶಕ್ತವಾಯಿತು. ಗಿಲ್, ಜೈಸ್ವಾಲ್, ಗಾಯಕ್ವಾಡ್ ಭಾರತದ ಪರ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿ ಉತ್ತಮ ಮೊತ್ತ ಕಲೆಹಾಕಲು ನೆರವಾದರೆ, ವೇಗದ ಬೌಲರ್ಗಳಾದ ಆವೇಶ್ ಖಾನ್, ಖಲೀಲ್ ಅಹ್ಮದ್ ಬೌಲಿಂಗ್ನಲ್ಲಿ ಮಿಂಚಿದರು.