ಟೀಂ ಇಂಡಿಯಾದ ಸ್ಟಾರ್ ವಿಕೆಟ್ ಕೀಪರ್ ಬ್ಯಾಟರ್ ಕೆ.ಎಲ್ ರಾಹುಲ್ ಇವರು ಎಷ್ಟೋ ಪಂದ್ಯಗಳಲ್ಲಿ ಮ್ಯಾಚ್ ವಿನ್ನಿಂಗ್ ನಾಕ್ ಆಡಿದ್ದಾರೆ. ಈ ಮೂಲಕವೇ ಕೆ.ಎಲ್ ರಾಹುಲ್ ಅಪಾರ ಅಭಿಮಾನಿಗಳನ್ನು ಸಂಪಾದಿಸಿದ್ದಾರೆ. ಹಲವು ದಿನಗಳ ಬಳಿಕ ಟೀಂ ಇಂಡಿಯಾಗೆ ಭರ್ಜರಿ ಕಮ್ಬ್ಯಾಕ್ ಮಾಡಿರೋ ಕೆ.ಎಲ್ ರಾಹುಲ್ ಪರ್ಮನೆಂಟ್ ಸ್ಥಾನ ಪಡೆಯಲು ಸಜ್ಜಾಗಿದ್ದಾರೆ. ಈ ಮಧ್ಯೆ ಕೆ.ಎಲ್ ರಾಹುಲ್ ನಿವೃತ್ತಿ ಘೋಷಿಸಿದ್ರು ಎಂಬ ವಿಚಾರ ಭಾರೀ ವೈರಲ್ ಆಗ್ತಿದೆ.
ಕೆ.ಎಲ್ ರಾಹುಲ್ ಹಲವು ದಿನಗಳ ಬಳಿಕ ಟೀಂ ಇಂಡಿಯಾಗೆ ಕಮ್ ಬ್ಯಾಕ್ ಮಾಡಿದ್ರು. ಶ್ರೀಲಂಕಾ ವಿರುದ್ಧ ಸರಣಿಯಲ್ಲಿ 2 ಪಂದ್ಯಗಳನ್ನು ಆಡಿದ್ರು. ಇವರು ತಂಡದ ನಿರೀಕ್ಷೆಗೆ ತಕ್ಕಂತೆ ಕೆ.ಎಲ್ ರಾಹುಲ್ ಆಡಲಿಲ್ಲ. ಹೀಗೆ ಕಳಪೆ ಪ್ರದರ್ಶನ ನೀಡಿದ್ರೆ ಕೆ.ಎಲ್ ರಾಹುಲ್ಗೆ ಟೀಂ ಇಂಡಿಯಾದಲ್ಲಿ ಸ್ಥಾನ ಸಿಗುವುದು ಬಹುತೇಕ ಡೌಟ್ ಎಂಬ ಮಾತುಗಳು ಕೇಳಿ ಬಂದಿವೆ.
ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುವ ಇನ್ಸ್ಟಾಗ್ರಾಮ್ ಪೋಸ್ಟ್ನಲ್ಲಿ, ‘ಸಾಕಷ್ಟು ಯೋಚಿಸಿದ ಬಳಿಕ ನಾನು ವೃತ್ತಿಪರ ಕ್ರಿಕೆಟ್ಗೆ ನಿವೃತ್ತಿ ಘೋಷಿಸಲು ನಿರ್ಧರಿಸಿದ್ದೇನೆ. ಈ ನಿರ್ಧಾರವು ಸುಲಭವಲ್ಲ, ಏಕೆಂದರೆ ಅನೇಕ ವರ್ಷಗಳಿಂದ ಕ್ರಿಕೆಟ್ ನನ್ನ ಜೀವನದ ಪ್ರಮುಖ ಭಾಗವಾಗಿದೆ. ನನ್ನ ವೃತ್ತಿಜೀವನದುದ್ದಕ್ಕೂ ನನ್ನನ್ನು ಬೆಂಬಲಿಸಿದ ನನ್ನ ಕುಟುಂಬ, ಸ್ನೇಹಿತರು, ತಂಡದ ಸಹ ಆಟಗಾರರು ಮತ್ತು ಅಭಿಮಾನಿಗಳಿಗೆ ನಾನು ತುಂಬಾ ಕೃತಜ್ಞನಾಗಿದ್ದೇನೆ. ಮೈದಾನದ ಒಳಗೆ ಮತ್ತು ಹೊರಗೆ ನಾನು ಪಡೆದ ಅನುಭವಗಳು ಮತ್ತು ನೆನಪುಗಳು ನಿಜವಾಗಿಯೂ ಬೆಲೆಕಟ್ಟಲಾಗದವು. ನನ್ನ ದೇಶವನ್ನು ಪ್ರತಿನಿಧಿಸಲು ಮತ್ತು ಅನೇಕ ಪ್ರತಿಭಾವಂತ ಕ್ರಿಕೆಟಿಗರೊಂದಿಗೆ ಆಡಿದ್ದು ನನಗೆ ಹೆಮ್ಮೆ ತಂದಿದೆ. ಈ ಅದ್ಭುತ ಪ್ರಯಾಣದ ಭಾಗವಾಗಿದ್ದಕ್ಕಾಗಿ ಎಲ್ಲರಿಗೂ ಧನ್ಯವಾದಗಳು’ ಎಂದು ಬರೆದಿದೆ.