ಬಾಂಗ್ಲಾದೇಶದಲ್ಲಿ ನಡೆಯಬೇಕಿದ್ದ ಮಹಿಳಾ ಟಿ20 ವಿಶ್ವಕಪ್ ಅನ್ನು ಯುಎಇ ದೇಶಕ್ಕೆ ಸ್ಥಳಾಂತರಿಸಲಾಗಿದೆ. ಅಕ್ಟೋಬರ್ 3 ರಿಂದ ಆರಂಭವಾಗಲಿರುವ 10 ತಂಡಗಳ ನಡುವಣ ವುಮೆನ್ಸ್ ಟಿ20 ವರ್ಲ್ಡ್ ಕಪ್ ಟೂರ್ನಿಯ ಫೈನಲ್ ಪಂದ್ಯವು ಅಕ್ಟೋಬರ್ 20 ರಂದು ನಡೆಯಲಿದೆ.
ಬಹುನಿರೀಕ್ಷಿತ ಮಹಿಳಾ ಟಿ20 ವಿಶ್ವಕಪ್ ನಾಳೆಯಿಂದ (ಅಕ್ಟೋಬರ್ 3) ಶುರುವಾಗಲಿದೆ. ಯುಎಇನಲ್ಲಿ ನಡೆಯಲಿರುವ ಈ ಬಾರಿಯ ಟಿ20 ವಿಶ್ವಕಪ್ನಲ್ಲಿ ಒಟ್ಟು 10 ತಂಡಗಳು ಕಣಕ್ಕಿಳಿಯಲಿವೆ. ಈ ತಂಡಗಳನ್ನು ಎರಡು ಗ್ರೂಪ್ಗಳಲ್ಲಿ ವಿಂಗಡಿಸಲಾಗಿದ್ದು, ಅದರಂತೆ ಮೊದಲ ಸುತ್ತಿನಲ್ಲಿ ಗುಂಪುಗಳಲ್ಲಿನ ತಂಡಗಳ ನಡುವೆ ಪಂದ್ಯಗಳು ನಡೆಯಲಿದೆ.
ಇಲ್ಲಿ ಗ್ರೂಪ್-A ನಲ್ಲಿ ಆಸ್ಟ್ರೇಲಿಯಾ, ಭಾರತ, ನ್ಯೂಝಿಲೆಂಡ್, ಪಾಕಿಸ್ತಾನ್ ಮತ್ತು ಶ್ರೀಲಂಕಾ ತಂಡಗಳು ಕಾಣಿಸಿಕೊಂಡರೆ, ಗ್ರೂಪ್-B ನಲ್ಲಿ ಸೌತ್ ಆಫ್ರಿಕಾ, ಇಂಗ್ಲೆಂಡ್, ವೆಸ್ಟ್ ಇಂಡೀಸ್, ಬಾಂಗ್ಲಾದೇಶ್ ಮತ್ತು ಸ್ಕಾಟ್ಲೆಂಡ್ ತಂಡಗಳು ಕಣಕ್ಕಿಳಿಯಲಿವೆ. ಈ ತಂಡಗಳ ನಡುವಣ ಪಂದ್ಯಗಳ ಸಂಪೂರ್ಣ ವೇಳಾಪಟ್ಟಿ ಈ ಕೆಳಗಿನಂತಿದೆ……