ಪ್ಯಾರಿಸ್ ಪ್ಯಾರಾಲಿಂಪಿಕ್ಸ್ನಲ್ಲಿ ಭಾರತಕ್ಕೆ ಮೊದಲ ಚಿನ್ನದ ಪದಕ ಸಿಕ್ಕಿದೆ. ಮಹಿಳೆಯರ 10 ಮೀಟರ್ ಏರ್ ರೈಫಲ್ (SH1) ವಿಭಾಗದಲ್ಲಿ ಅವನಿ ಲೇಖರಾ ಇತಿಹಾಸ ಸೃಷ್ಟಿಸಿದ್ದು, 249.7 ಅಂಕ ಗಳಿಸುವ ಮೂಲಕ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದಾರೆ. ಇದಲ್ಲದೆ ಟೋಕಿಯೋ ಒಲಿಂಪಿಕ್ಸ್ನಲ್ಲಿ ನಿರ್ಮಿಸಿದ್ದ ತಮ್ಮದೇ ದಾಖಲೆಯನ್ನು ಅವನಿ ಮುರಿದಿದ್ದಾರೆ.
ವಾಸ್ತವವಾಗಿ ಟೋಕಿಯೋ ಒಲಿಂಪಿಕ್ಸ್ನಲ್ಲಿ ಅವನಿ ಒಟ್ಟಾರೆಯಾಗಿ 249.6 ಅಂಕ ಕಲೆಹಾಕಿ ಚಿನ್ನದ ಪದಕ ಗೆದ್ದಿದ್ದರು. ಇದೀಗ ಪ್ಯಾರಿಸ್ನಲ್ಲಿ 249.7 ಅಂಕ ಗಳಿಸುವ ಮೂಲಕ ಚಿನ್ನ ಗೆದ್ದಿರುವ ಅವನಿ ತಮ್ಮದೇ ಹಳೆಯ ದಾಖಲೆಯನ್ನು ಪುಡಿಗಟ್ಟಿದ್ದಾರೆ. ಇದಲ್ಲದೆ ಪ್ಯಾರಾಲಿಂಪಿಕ್ಸ್ನಲ್ಲಿ ಸತತ ಎರಡನೇ ಬಾರಿಗೆ ಚಿನ್ನದ ಪದಕ ಗೆದ್ದ ಸಾಧನೆಯನ್ನು ಅವನಿ ಮಾಡಿದ್ದಾರೆ. ಇನ್ನು ಇದೇ ಸ್ಪರ್ಧೆಯಲ್ಲಿ ಭಾರತದ ಮತ್ತೋರ್ವ ಪ್ಯಾರಾ ಶೂಟರ್ ಮೋನಾ ಅಗರ್ವಾಲ್ ಕಂಚಿನ ಪದಕ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ.