ಪ್ಯಾರಿಸ್ನಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ನಲ್ಲಿ ಭಾರತೀಯ ಕ್ರೀಡಾಪಟುಗಳು ಅತ್ಯುತ್ತಮ ಪ್ರದರ್ಶನ ಮುಂದುವರೆಸಿದ್ದು, ಭಾರತಕ್ಕೆ ಮತ್ತೊಂದು ಪದಕ ಸಿಕ್ಕಿದೆ. ಸೋಮವಾರ ಭಾರತದ ಯೋಗೇಶ್ ಕಥುನಿಯಾ ಅವರು ಪುರುಷರ ಡಿಸ್ಕಸ್ ಥ್ರೋ ಎಫ್-56 ಸ್ಪರ್ಧೆಯಲ್ಲಿ 2ನೇ ಸ್ಥಾನ ಪಡೆಯುವ ಮೂಲಕ ಬೆಳ್ಳಿ ಪದಕಕ್ಕೆ ಕೊರಳೊಡ್ಡಿದ್ದಾರೆ.
42.22 ಮೀಟರ್ ಡಿಸ್ಕಸ್ ಎಸೆಯುವ ಮೂಲಕ ಬೆಳ್ಳಿ ಪದಕ ತಮ್ಮದಾಗಿಸಕೊಂಡಿದ್ದಾರೆ. ಈ ಮೂಲಕ ಭಾರತದ ಭತ್ತಳಿಕೆಗೆ 8ನೇ ಪದಕ ಸೇರ್ಪಡೆಯಾಗಿದೆ. ಯೋಗೇಶ್ ಸತತ 2ನೇ ಬಾರಿಗೆ ಪ್ಯಾರಾಲಿಂಪಿಕ್ಸ್ನಲ್ಲಿ ಪದಕ ಗೆದ್ದ ಸಾಧನೆ ಮಾಡಿದ್ದಾರೆ. ಮೂರು ವರ್ಷಗಳ ಹಿಂದೆ ಟೋಕಿಯೋನಲ್ಲಿ ನಡೆದ ಪ್ಯಾರಾಲಿಂಪಿಕ್ಸ್ನಲ್ಲಿ ಬೆಳ್ಳಿ ಗೆದ್ದಿದ್ದ ಯೋಗೇಶ್ ಚೊಚ್ಚಲ ಆವೃತ್ತಿಯಲ್ಲೇ ಪದಕ ಗೆದ್ದ ದಾಖಲೆ ತಮ್ಮದಾಗಿಸಿಕೊಂಡಿದ್ದರು.