2024 ಐಸಿಸಿ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕಾ ವಿರುದ್ದ ಟೀಮ್ ಇಂಡಿಯಾ ಗೆದ್ದು ಬೀಗಿದೆ. ವಿಶ್ವಕಪ್ ಗೆದ್ದ ಬೆನ್ನಲೇ ಟೀಮ್ ಇಂಡಿಯಾದ ಕ್ಯಾಪ್ಟನ್ ಹಾಗೂ ಮಾಜಿ ಕ್ಯಾಪ್ಟನ್ ಆದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅಂತಾರಾಷ್ಟ್ರಿಯ ಟಿ20 ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ಇನ್ನು, ರೋಹಿತ್ ಹಾಗೂ ಕೊಹ್ಲಿ ನಿವೃತ್ತಿ ಆಗಿದ್ದು, ಫ್ಯಾನ್ಸ್ಗೆ ಬೇಸರ ತಂದಿತ್ತು. ಅದ್ರೆ ಈಗ ಇವರ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ.
ಆರ್ಸಿಬಿ ಕ್ಯಾಪ್ಟನ್ ಆಗಿರುವ ಫಾಫ್ ಡುಪ್ಲೆಸಿಸ್ಗೆ 40 ವರ್ಷ. ಹಾಗಾಗಿ ಐಪಿಎಲ್ನಿಂದ ಫಾಫ್ ನಿವೃತ್ತಿ ಆಗೋ ಸಾಧ್ಯತೆ ಇದೆ. ಇದರ ಬೆನ್ನಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಕೊಹ್ಲಿ ಬಗ್ಗೆ ಅಂತರಾಷ್ಟ್ರಿಯ ಮಹತ್ವದ ಜವಾಬ್ದಾರಿಗಳಿಂದ ಮುಕ್ತರಾಗಿದ್ದು, ಐಪಿಎಲ್ನಲ್ಲಿ ಮತ್ತೆ ಆರ್ಸಿಬಿ ತಂಡವನ್ನು ಮುನ್ನಡೆಸಲು ಕೊಹ್ಲಿಗೆ ಮನವರಿಕೆ ಮಾಡುವ ಸಾಧ್ಯತೆ ಇದೆ. ಆದ್ದರಿಂದ ಮುಂದಿನ ಸೀಸನ್ಗೆ ಕೊಹ್ಲಿ ಅವರಿಗೆ ಆರ್ಸಿಬಿ ಪಟ್ಟ ನೀಡಲು ಫ್ರಾಂಚೈಸಿ ನಿರ್ಧಾರ ಮಾಡಿದೆ ಅನ್ನೋ ಸುದ್ದಿ ಹರಿದಾಡುತ್ತಿದೆ.
ರೋಹಿತ್ ಶರ್ಮಾ ಅಂತರಾಷ್ಟ್ರೀಯ ಟಿ20 ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ ಬಳಿಕ 2025ರ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ರೋಹಿತ್ ಶರ್ಮಾ ಅವರು ಮುಂಬೈ ಇಂಡಿಯನ್ಸ್ ತಂಡ ತೊರೆಯೋದು ಪಕ್ಕಾ ಆಗಿದೆ. ಮೂಲಗಳ ಪ್ರಕಾರ ಆರ್ಸಿಬಿ ಫ್ರಾಂಚೈಸಿ ಕೂಡ ಒಂದು ವೇಳೆ ಕೊಹ್ಲಿ ಕ್ಯಾಪ್ಟನ್ ಆಗಲು ನಿರಾಕರಣೆ ಮಾಡಿದ್ರೆ ರೋಹಿತ್ ಶರ್ಮಾ ಅವರನ್ನು ಬೆಂಗಳೂರು ತಂಡಕ್ಕೆ ಕರೆ ತರೋ ಸಾಧ್ಯತೆಗಳು ಇವೆ. ರೋಹಿತ್ ಕ್ಯಾಪ್ಟನ್ ಆಗಲಿ, ಕೊಹ್ಲಿ ಆರ್ಸಿಬಿ ಪರ ಚೆನ್ನಾಗಿ ಆಡಿ ಕಪ್ ಗೆಲ್ಲಿಸಲಿ ಎಂದು ಫ್ಯಾನ್ಸ್ ಸೋಷಿಯಲ್ ಮೀಡಿಯಾದಲ್ಲಿ ಹಲ್ ಚಲ್ ಮಾಡುತ್ತಿದ್ದಾರೆ.