ಸಿಂಗಾಪುರದ ರೆಸಾರ್ಟ್ಸ್ ವರ್ಲ್ಡ್ ಸೆಂಟೋಸಾದಲ್ಲಿರುವ ಈಕ್ವೇರಿಯಸ್ ಹೋಟೆಲ್ನಲ್ಲಿ ನಡೆದ 2024 ರ ವಿಶ್ವ ಚೆಸ್ ಚಾಂಪಿಯನ್ಶಿಪ್ ಕೊನೆಯ ಹಾಗೂ 14ನೇ ಗೇಮ್ನಲ್ಲಿ ಗೆಲುವು ಸಾಧಿಸುವ ಮೂಲಕ ಭಾರತದ 18 ವರ್ಷದ ಗ್ರ್ಯಾಂಡ್ಮಾಸ್ಟರ್ ಡಿ ಗುಕೇಶ್ ವಿಶ್ವ ಚೆಸ್ ಚಾಂಪಿಯನ್ಶಿಪ್ನಲ್ಲಿ ಇತಿಹಾಸ ಸೃಷ್ಟಿಸಿದ್ದಾರೆ.
ಕಳೆದ ಬಾರಿಯ ಚಾಂಪಿಯನ್ ಚೀನಾದ ಡಿಂಗ್ ಲಿರೆನ್ಗೆ ಚೆಕ್ ಮೇಟ್ ನೀಡಿದ ಗುಕೇಶ್, ವಿಶ್ವನಾಥನ್ ಆನಂದ್ ನಂತರ ವಿಶ್ವ ಚೆಸ್ ಚಾಂಪಿಯನ್ಶಿಪ್ ಗೆದ್ದ ಎರಡನೇ ಭಾರತೀಯನೆನಿಸಿಕೊಂಡಿದ್ದಾರೆ. ಇದಲ್ಲದೆ ಕೇವಲ 18ನೇ ವಯಸ್ಸಿಗೆ ಚಾಂಪಿಯನ್ ಆಗುವ ಮೂಲಕ ಚೆಸ್ ಇತಿಹಾಸದಲ್ಲಿ ಈ ಸಾಧನೆ ಮಾಡಿದ ಅತ್ಯಂತ ಕಿರಿಯ ಚೆಸ್ ಪಟು ಎಂಬ ದಾಖಲೆಯನ್ನು ಸೃಷ್ಟಿಸಿದ್ದಾರೆ.
ವಿಶ್ವನಾಥ್ ಆನಂದ್ ಬಳಿಕ ವಿಶ್ವ ಚಾಂಪಿಯನ್ ಶಿಪ್ ಗೆದ್ದ 2ನೇ ಭಾರತೀಯರಾಗಿದ್ದಾರೆ.
2019 : 12ನೇ ವಯಸ್ಸಿಗೆ ಅತಿ ಕಿರಿಯ ಗ್ರ್ಯಾಂಡ್ ಮಾಸ್ಟರ್
2018 : 12 ವರ್ಷದೊಳಗಿನ ವಿಶ್ವ ಯುವ ಚೆಕ್ ಚಾಂಪಿಯನ್ ಶಿಪ್
2018 : ಏಷ್ಯನ್ ಯೂತ್ ಚೆಸ್ ಚಾಂಪಿಯನ್
2019 : ಇಂಡಿಯನ್ ಚೆಕ್ ಚಾಂಪಿಯನ್ ಶಿಪ್