ಟೀಂ ಇಂಡಿಯಾದ ಯುವ ಆಲ್ ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಕೊನೆಗೂ ಆಸ್ಟ್ರೇಲಿಯಾ ಪ್ರವಾಸದಲ್ಲಿ ಚೊಚ್ಚಲ ಶತಕ ಬಾರಿಸಿದ್ದಾರೆ. ಮೆಲ್ಬೋರ್ನ್ನ ಎಂಸಿಜಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ದಾಂಡಿಗ ನಿತೀಶ್ ಕುಮಾರ್ ರೆಡ್ಡಿ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ 8ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ನಿತೀಶ್ 171 ಎಸೆತಗಳಲ್ಲಿ ಚೊಚ್ಚಲ ಶತಕ ಪೂರೈಸಿದರು.
ಈ ಹಿಂದೆ 4 ಬಾರಿ ತಂಡಕ್ಕೆ ನೆರವಾಗಿದ್ದ ನಿತೀಶ್ ಅರ್ಧಶತಕ ಗಡಿಯಲ್ಲಿ ವಿಕೆಟ್ ಒಪ್ಪಿಸಿದ್ದರು. ಇಂದೂ ತಂಡ ಸಂಕಷ್ಟದಲ್ಲಿದ್ದಾಗ ಬ್ಯಾಟಿಂಗ್ ಇಳಿದ ನಿತೀಶ್ ಕುಮಾರ್ ರೆಡ್ಡಿ ಆಸ್ಟ್ರೇಲಿಯಾದ ವೇಗಿಗಳನ್ನ ಸಮರ್ಥವಾಗಿ ಎದುರಿಸಿದರು. ಜಡೇಜಾ ವಿಕೆಟ್ ಪತನದ ವೇಳೆಗೆ ಭಾರತ ತಂಡವು ಫಾಲೋ ಆನ್ನಿಂದ ಪಾರಾಗಲು ಇನ್ನೂ 55 ರನ್ಗಳ ಅಗತ್ಯವಿತ್ತು. ಈ ವೇಳೆಗೆ ಎಂಟನೇ ವಿಕೆಟ್ಗೆ ಜತೆಯಾದ ನಿತೀಶ್ ಕುಮಾರ್ ರೆಡ್ಡಿ ಹಾಗೂ ವಾಷಿಂಗ್ಟನ್ ಸುಂದರ್ ಸಮಯೋಚಿತ ಶತಕದ ಜೊತೆಯಾಟವಾಡುವ ಮೂಲಕ ತಂಡವನ್ನು ಫಾಲೋ ಆನ್ ಭೀತಿಯಿಂದ ಪಾರು ಮಾಡುವಲ್ಲಿ ಯಶಸ್ವಿಯಾದರು.
ಮಿಚೆಲ್ ಸ್ಟಾರ್ಕ್ 83ನೇ ಓವರ್ ನ ಮೂರನೇ ಎಸೆತದಲ್ಲಿ ಆಫ್ ಸೈಡ್ ಡ್ರೈವ್ ಮೂಲಕ ಅರ್ಧಶತಕದ ಗಡಿ ದಾಟಿದರು. ಅರ್ಧಶತಕ ಪೂರೈಸಿದ ಕೂಡಲೇ ನಿತೀಶ್ ಕುಮಾರ್ ರೆಡ್ಡಿ ಪುಷ್ಪಾ ಸಿನಿಮಾದಲ್ಲಿ ಅಲ್ಲು ಅರ್ಜುನ್ ಟ್ರೇಡ್ ಮಾರ್ಕ್ ಶೈಲಿಯಲ್ಲಿ ಸಂಭ್ರಮಾಚರಣೆ ಮಾಡಿ ಗಮನ ಸೆಳೆದರು. ಪುಷ್ಪಾ ಸ್ಟೈಲ್ನಲ್ಲಿ ತಗ್ಗೊದೇ ಇಲ್ಲ ಅನ್ನೊ ರೀತಿ ಬೈಟ್ ಹಿಡಿದು ಸಂಭ್ರಮಿಸಿದ್ರು. ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡವು 474 ರನ್ಗಳಿಸಿ ಆಲೌಟ್ ಆಗಿದೆ. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡುತ್ತಿರುವ ಟೀಮ್ ಇಂಡಿಯಾ ಪರ ನಿತೀಶ್ ಕುಮಾರ್ ರೆಡ್ಡಿ ಭರ್ಜರಿ ಶತಕ ಸಿಡಿಸಿದ್ದು, ಈ ಮೂಲಕ ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧ ದಿಟ್ಟ ಹೋರಾಟವನ್ನೇ ಪ್ರದರ್ಶಿಸಿದೆ.
ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡವು ಮೊದಲ ಇನಿಂಗ್ಸ್ನಲ್ಲಿ 474 ರನ್ ಕಲೆಹಾಕಿದೆ. ಇದಕ್ಕುತ್ತರವಾಗಿ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕನಾಗಿ ಕಣಕ್ಕಿಳಿದ ರೋಹಿತ್ ಶರ್ಮಾ ಕೇವಲ 3 ರನ್ಗಳಿಸಿ ಔಟಾದರೆ, ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಕೆಎಲ್ ರಾಹುಲ್ 24 ರನ್ಗಳಿಸಿ ವಿಕೆಟ್ ಒಪ್ಪಿಸಿದರು. ಹಂತದಲ್ಲಿ ಕಣಕ್ಕಿಳಿದ ನಿತೀಶ್ ಕುಮಾರ್ ರೆಡ್ಡಿ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದರು. ಎಚ್ಚರಿಕೆಯೊಂದಿಗೆ ರನ್ ಗಳಿಸುತ್ತಾ ಸಾಗಿದ ನಿತೀಶ್ 81 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಹಾಫ್ ಸೆಂಚುರಿಯ ಬಳಿಕ ಆಸೀಸ್ ಬೌಲರ್ಗಳನ್ನು ಕಾಡಿದ ಯುವ ದಾಂಡಿಗ ಟೀಮ್ ಇಂಡಿಯಾ ಮೊತ್ತವನ್ನು 300ರ ಗಡಿದಾಟಿಸುವಲ್ಲಿ ಪ್ರಮುಖ ಪಾತ್ರವಹಿಸಿದರು.