- ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಕೊಣ್ಣೂರ ರಾಜ್ಯಕ್ಕೆ ಮೊದಲ ಸ್ಥಾನ ಪಡೆದಿದ್ದಾರೆ
- ಸಿದ್ದಾಂತ ನಾಯಿಕಬಾ ಗಡಗೆ ಅವರು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ
2023 – 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಕೊನೆಗೂ ಹೊರಬಿದ್ದಿದೆ. 6 ಲಕ್ಷದ 31 ಸಾವಿರದ 204 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಇನ್ನೂ ಬಾಗಲಕೋಟೆ ಜಿಲ್ಲೆಯ ಮುಧೋಳದ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಕೊಣ್ಣೂರ ರಾಜ್ಯಕ್ಕೆ ಮೊದಲ ಸ್ಥಾನ ಪಡೆದಿದ್ದಾರೆ. ಅಂಕಿತಾ ಮಳ್ಳಿಗೇರಿ ಮೊರಾರ್ಜಿ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡಿದ್ದು, 625ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಟಾಪರ್ ಎನಿಸಿಕೊಂಡಿದ್ದಾಳೆ.
ಹಾಗೆಯೇ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಶೇಡಬಾಳ ಗ್ರಾಮದ ಸಿದ್ದಾಂತ ನಾಯಿಕಬಾ ಗಡಗೆ ಅವರು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 625ಕ್ಕೆ 624 ಅಂಕ ಪಡೆದು ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾರೆ. ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡ ಶೇಡಬಾಳದ ಆಚಾರ್ಯ ಸುಬಲಸಾಗರ ಫ್ರೌಢ ವಿದ್ಯಾಮಂದಿರದ ಈ ರೈತನ ಮಗ, ಇಂಗ್ಲೀಷ್ಗೆ 99 ಅಂಕ ಪಡೆದಿದ್ದು, ಉಳಿದೆಲ್ಲಾ ವಿಷಯಗಳಿಗೂ ಸಂಪೂರ್ಣ ಅಂಕಗಳನ್ನು ಬಾಚಿಕೊಂಡಿದ್ದಾರೆ..