ರಾಜ್ಯ ರಾಜಧಾನಿಯಲ್ಲೊಂದು ಅಮಾನವೀಯ ಕೃತ್ಯ ನಡೆದಿದೆ. ಹಸುವಿನ ಕೆಚ್ಚಲು ಕೊಯ್ದ ಕಿಡಿಗೇಡಿಗಳು ಅಟ್ಟಹಾಸ ಮೆರೆದಿದ್ದಾರೆ. ಮೂಕ ಪ್ರಾಣಿಗಳು ರಕ್ತದ ಮಡುವಿನಲ್ಲಿ ಬಿದ್ದು ನರಳಾಡಿವೆ. ಈ ಘಟನೆ ಚಾಮರಾಜಪೇಟೆಯ ವಿನಾಯಕ ನಗರದಲ್ಲಿ ನಡೆದಿದ ಘಟನೆ ಕುರಿತು ರಾಜ್ಯಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಸ್ಥಳೀಯ ಶಾಸಕ ಹಾಗೂ ಸಚಿವಾದ ಜಮೀರ್ ಅಹ್ಮದ್ ಖಾನ್ ಅವರು ಸ್ಥಳಕ್ಕೆ ಭೇಟಿ ನೀಡಿ ಹಸು ಕೊಡಿಸುವುದಾಗಿ ಭರವಸೆ ನೀಡಿದ್ದಾರೆ.
ಸಿಎಂ ಕಮಿಷನ್ ಗೆ ಕರೆ ಮಾಡಿ ಹೇಳಿದ್ದಾರೆ
ಚಾಮರಾಜಪೇಟೆ ಬಳಿ ಹಸುಗಳ ಕೆಚ್ಚಲು ಕೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಸ್ಥಳಕ್ಕೆ ಸ್ಥಳೀಯ ಶಾಸಕ ಹಾಗೂ ಸಚಿವ ಜಮೀರ್ ಅಹಮದ್ ಖಾನ್ ಭೇಟಿ ನೀಡಿದ್ದಾರೆ. ಬಳಿಕ ಮಾತನಾಡಿದ ಅವರು, ನಾನು, ಮುಖ್ಯಮಂತ್ರಿಗಳು ಬಳ್ಳಾರಿಯಲ್ಲಿ ಇದ್ವಿ. ವಿಚಾರ ಗೊತ್ತಾದ ತಕ್ಷಣ ಮುಖ್ಯಮಂತ್ರಿಗಳು ಕಮಿಷನರ್ಗೆ ಕರೆ ಮಾಡಿ ಹೇಳಿದ್ದಾರೆ. ಅದು ಯಾರೇ ಆಗಿರಲಿ, ಕೂಡಲೇ ಬಂಧಿಸುವಂತೆ ಹೇಳಿದ್ದಾರೆ ಎಂದರು.
ಯಾರೇ ಆದ್ರೂ ಅವನ ಮೇಲೆ ಕಠಿಣ ಕ್ರಮ
ಪ್ರಾಣಿಗಳ ಮೇಲೆ ಯಾಕೆ ದ್ವೇಷ, ಈ ತರ ಮಾಡಿದವನು ಮನುಷ್ಯನೇ ಅಲ್ಲ. ಏನೇ ದ್ವೇಷ, ಗಲಾಟೆ ಇದ್ರೂ ಈ ತರ ಮಾಡಬಾರದು. ನಾನು ಕೂಡ ಪೊಲೀಸರಿಗೆ ಹೇಳಿದ್ದೇನೆ. ಯಾರೇ ಆದ್ರೂ ಅವನ ಮೇಲೆ ಕಠಿಣ ಕ್ರಮ ಆಗಬೇಕು ಎಂದರು. ಮೂರು ಹೊಸ ಹಸುಗಳನ್ನು ನಾನೇ ಕೊಡಿಸುತ್ತೇನೆ. ಅವರ ಕುಟುಂಬದ ಜೊತೆಗೆ ನಾನು ಇದೀನಿ ಎಂದರು.
ಮನೆಗೆ ಹೊಸ ಹಸು ಕೊಡಿಸಲು ಸೂಚನೆ
ಸ್ಥಳದಲ್ಲಿದ್ದ ವಿನಯ್ ಎಂಬಾತನಿಗೆ ಮೂರು ಹಸುಗಳನ್ನು ಕೊಡಿಸುವಂತೆ ಸಚಿವ ಜಮೀರ್ ಅಹ್ಮದ್ ಖಾನ್ ಸೂಚನೆ ನೀಡಿದರು. ನಾಳೆ ಅವರ ಮನೆ ಬಳಿ ಹೋಗಿ ಹೊಸ ಹಸುಗಳನ್ನ ಕೊಡಿಸಿ. ಹಸು ಕೊಡಿಸೋ ಜವಾಬ್ದಾರಿ ನಿಂದು ಅಂತಾ ಸಚಿವ ಜಮೀರ್ ಅಹ್ಮದ್ ಖಾನ್ ಸೂಚನೆ ನೀಡಿದ್ದಾರೆ.
ಯತ್ಮಾಳ್ ಆಕ್ರೋಶ
ಇನ್ನೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ಮಾತ್ರವಲ್ಲ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರತಿಕ್ರಿಯೆ ನೀಡಿ ಮುಸ್ಲಿಂಮರಲ್ಲಿ ಅಸಹಿಷ್ಟನುತೆ ಇದೆ ಅನ್ನೋದು ಗೊತ್ತಾಗುತ್ತೆ ಎಂದು ಕಿಡಿಕಾರಿದರು.
ಬೆಂಗಳೂರಿನಲ್ಲಿ ಹಸುಗಳ ಕೆಚ್ಚಲು ಕತ್ತರಿಸಿದ ಪ್ರಕರಣಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಶಾಸಕ ಯತ್ನಾಳ್ ವಾಗ್ದಾಳಿ ನಡೆಸಿದರು. ಪಶು ಆಸ್ಪತ್ರೆ ಮಾಡಬೇಕು ಎಂದು ದಾನಿಗಳು ಜಾಗ ನೀಡಿದ್ದರು. ಆದರೆ, ಜಮೀರ್ ಅಹಮದ್ ಅದನ್ನು ವಕ್ಪ್ ಎಂದು ಮಾಡಿದ್ದರು. ಹೈಕೋರ್ಟ್ ನಲ್ಲಿ ಅದಕ್ಕೆ ತಡೆಯಾಜ್ಞೆ ಸಿಕ್ಕಿದೆ. ಇದರಿಂದಾಗಿ ರೊಚ್ಚಿಗೆದ್ದ ಮತಾಂಧರು ಈ ಕೃತ್ಯ ಮಾಡಿದ್ದಾರೆ ಎಂದು ಆರೋಪಿಸಿದರು.
ಮುಸ್ಲಿಂಮರಲ್ಲಿ ಅಸಹಿಷ್ಣುತೆ ಇದೆ ಅನ್ನೋದು ಗೊತ್ತಾಗುತ್ತೆ. ಈ ಸರ್ಕಾರ ಮುಸ್ಲಿಂಮರನ್ನ ತುಷ್ಟಿಕರಣ ಮಾಡುತ್ತಿದೆ. ರಾಜ್ಯದಲ್ಲಿ ಗೋವುಗಳು ಕೂಡಾ ಸುರಕ್ಷಿತವಾಗಿಲ್ಲ. ಗೃಹಮಂತ್ರಿಗಳು ಈಗ ಏನ್ ಮಾಡ್ತಾರೆ ನೋಡೋಣ ಎಂದು ಯತ್ನಾಳ್ ಪ್ರತಿಕ್ರಿಯೆ ನೀಡಿದರು.