ಸುರತ್ಕಲ್ ನ ಕೃಷ್ಣಾಪುರದ 8ನೇ ಬ್ಲಾಕ್ ಬಳಿ ಭಾರಿ ಅಕ್ರಮ ಕಸಾಯಿಖಾನೆಯೊಂದು ಪತ್ತೆಯಾಗಿದ್ದು ಪೊಲೀಸರನ್ನೇ ಬೆಚ್ಚಿ ಬೀಳಿಸಿದೆ. ಸುಸಜ್ಜಿತ ಕಾಂಕ್ರಿಟ್ ಮನೆಯೊಂದರಲ್ಲಿ ಅಕ್ರಮವಾಗಿ ದನವನ್ನು ಕಡಿದು ಮಾಂಸವನ್ನಾಗಿ ಪರಿವರ್ತಿಸಿ ಸ್ಥಳೀಯ ಹೋಟೆಲ್ ಸಹಿತ ವಿವಿಧೆಡೆ ಸರಬರಾಜು ಮಾಡಲಾಗುತ್ತಿತ್ತು. ಈ ವೇಳೆ ಪೊಲೀಸರು ದಾಳಿ ನಡೆಸಿದಾಗ ಮೂವರು ಆರೋಪಿಗಳು ಪರಾರಿಯಾಗಿದ್ದಾರೆ. 16ಕ್ಕೂ ಅಧಿಕ ಗೋವುಗಳನ್ನು ರಕ್ಷಿಸಲಾಗಿದೆ.
ವಿಶ್ವ ಹಿಂದೂ ಪರಿಷತ್, ಬಜರಂಗದಳ, ಸುರತ್ಕಲ್ ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಜೀವಂತ ದನಗಳನ್ನ ರಕ್ಷಿಸಿದ್ದಾರೆ. ಮಾರಾಟ ಮಾಡುವ ಉದ್ದೇಶದಿಂದ ತಯಾರಿಸಿದ್ದ ದನದ ಮಾಂಸ, ಕೃತ್ಯಕ್ಕೆ ಬಳಸಿದ ವಾಹನವನ್ನು ಸುರತ್ಕಲ್ ಪೊಲೀಸರು ವಶಕ್ಕೆ ಪಡೆದು ಕೇಸ್ ದಾಖಲಿಸಿದ್ದಾರೆ.