ಎಎಪಿಯ ರಾಜ್ಯಸಭಾ ಸದಸ್ಯೆಯ ಸ್ವಾತಿ ಮಲಿವಾಲ್ ಅವರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಬಿಭವ್ ಕುಮಾರ್ಗೆ ಸಂಕಷ್ಟ ಎದುರಾಗಿದೆ. ಇನ್ನು ಬಿಭವ್ ಕುಮಾರ್ ಮೇಲೆ ದೆಹಲಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಆಕೆ ಪೊಲೀಸರಿಗೆ ನೀಡಿದ ಹೇಳಿಕೆಯಲ್ಲಿ, ಕುಮಾರ್ ತನ್ನ ಮೇಲೆ ಪದೇ ಪದೇ ಕ್ರೂರವಾಗಿ ಹಲ್ಲೆ ಮಾಡಿದ್ದಾನೆ. ಎಂದು ಮಲಿವಾಲ್ ಆರೋಪಿಸಿದ್ದಾರೆ.
ಮಲಿವಾಲ್ ಅವರು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸಕ್ಕೆ ಭೇಟಿ ನೀಡಿದ್ದರು. ಅವರು ಕುಮಾರ್ ಅವರನ್ನು ಸಂಪರ್ಕಿಸಲು ಪ್ರಯತ್ನಿಸಿದ್ದು, ಯಾವುದೇ ಪ್ರತಿಕ್ರಿಯೆ ಬರಲಿಲ್ಲ. ಎಂದಿನಂತೆ ನಿವಾಸಕ್ಕೆ ಬಂದು ಡ್ರಾಯಿಂಗ್ ರೂಮಿನಲ್ಲಿ ಕಾಯುತ್ತಾ ಕುಳಿತಿರುವಾಗ ಕುಮಾರ್ ಕೋಣೆಗೆ ಬಂದು ವಾಚಾಮಗೋಚರ ಬೈದರು. ಕುಮಾರ್ ನನಗೆ ಏಳೆಂಟು ಬಾರಿ ಕಪಾಳಮೋಕ್ಷ ಮಾಡಿದ್ದಾನೆ. ನನ್ನ ಎದೆ, ಹೊಟ್ಟೆ ಮತ್ತು ಸೂಕ್ಷ್ಮ ಭಾಗಗಳಿಗೆ ಹೊಡೆದಿದ್ದಾನೆ ಎಂದು ಮಲಿವಾಲ್ ಆರೋಪಿಸಿರುವುದಾಗಿ ಎಫ್ಐಆರ್ನಲ್ಲಿದೆ.