ಟಿ 20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ 2 ನೇ ಬಾರಿ ಟಿ 20 ವಿಶ್ವಕಪ್ ಎತ್ತಿ ಹಿಡಿದಿದೆ. ದಕ್ಷಿಣ ಆಫ್ರಿಕಾ ತಂಡವನ್ನು ಸೋಲಿಸಿ ರೋಹಿತ್ ಶರ್ಮಾ ನೃತೃತ್ವದ ತಂಡ ಗೆದ್ದು ಬೀಗಿದೆ. ಹೋಗಿರುವಾಗ ವಿಶ್ವಕಪ್ ಭಾರತ ಕ್ರಿಕೆಟ್ ತಂಡದ ಸಾಧನೆಗೆ ಸಿನಿತಾರೆಯರಿಂದ ಶುಭಾಶಯದ ಮಹಾಪೂರವೇ ಹರಿದು ಬರುತ್ತಿವೆ.
ರೋಹಿತ್ ಶರ್ಮಾ ತಂಡವನ್ನು ನಟ ಯಶ್ ಕೊಂಡಾಡಿದ್ದಾರೆ. ಇತಿಹಾಸದಲ್ಲಿ ಕೆತ್ತಿದ ಗೆಲುವು. ಟಿ 20 ವಿಶ್ವಕಪ್ 2024 ಗೆದ್ದ ಭಾರತೀಯ ಕ್ರಿಕೆಟ್ ತಂಡಕ್ಕೆ ಅಭಿನಂದನೆಗಳು. ಜೈ ಹಿಂದ್ ಎಂದು ನ್ಯಾಷನಲ್ ಸ್ಟಾರ್ ಯಶ್ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
ಭಾರತ ತಂಡದ ಸಾಧನೆ ಬಗ್ಗೆ ರಶ್ಮಿಕಾ ಮಂದಣ್ಣ ಕೂಡ ಪ್ರತಿಕ್ರಿಯಿಸಿದ್ದಾರೆ. ಈಗ ಭಾರತ ಕ್ರಿಕೆಟ್ ತಂಡ ವಿಶ್ವಕಪ್ ಗೆದ್ದಿದೆ. ಅಭಿನಂದನೆಗಳು ಟೀಂ ಇಂಡಿಯಾ ಎಂದು ಇನ್ಸ್ಟಾಗ್ರಾಂನಲ್ಲಿ ಹಾಕಿದ್ದಾರೆ.
ರಾಹುಲ್ ದ್ರಾವಿಡ್ ಅವರಿಗೆ ಅದ್ಭುತವಾಗಿ ವಿದಾಯ ಹೇಳಲಾಗಿದೆ. ಬಹಳ ಬಹಳ ಹೆಮ್ಮೆಯಾಗ್ತಿದೆ ಸರ್. ಘನತೆಯ ಶಿಖರ ಇದು. ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ ಅವರುಗಳು ತಮ್ಮ ಹಿರೋಗಳಾಗಿ ಹೊರಹೊಮ್ಮಿದ್ದಕ್ಕೆ ಧನ್ಯವಾದ. ಆ ಕೊನೆಯ ಓವರ್ನಲಲಿ ಅದ್ಭುತ ಕ್ಯಾಚ್ ಪಡೆದ ಸೂರ್ಯಕುಮಾರ್ ಯಾದವ್ಗೆ ವಿಶೇಷ ಧನ್ಯವಾದ ಎಂದಿದ್ದಾರೆ. ಅಲ್ಲದೇ ತಮ್ಮ ನಿವಾಸದಲ್ಲಿ ಆಪ್ತರಾದ ಚಕ್ರವರ್ತಿ ಚಂದ್ರಚೂಡ್, ವಿನಯ್ ಗೌಡ, ನಟ ಪ್ರದೀಪ್ ಜೊತೆ ಪಂದ್ಯ ವೀಕ್ಷಿಸಿ ಸುದೀಪ್ ಸಂಭ್ರಮಿಸಿದ್ದಾರೆ.
ಅಡ್ಡ ಗೋಡೆ ಮೇಲೆ ದೀಪ ಇಡೋ ಕಾಲದಲ್ಲಿ, ಗೋಡೆ ಮೇಲೆ ವರ್ಲ್ಡ್ ಕಪ್ ಇಡೋರ್ ಆಗಬೇಕು ಎಂದು ನಟ ಶಿವರಾಜ್ಕುಮಾರ್ ಪೋಸ್ಟ್ ಮಾಡಿದ್ದಾರೆ. ಟೀಂ ಇಂಡಿಯಾವನ್ನು ಅಭಿನಂದಿಸಿದರು. ಅಲ್ಲದೇ ಐತಿಹಾಸಿಕ ವಿಜಯ ಎಂದು ರಿಷಭ್ ಶೆಟ್ಟಿ ಕೂಡ ಸಂಭ್ರಮಿಸಿದ್ದಾರೆ.