- ಟಿ 20 ಕ್ರಿಕೆಟ್ ಟೂರ್ನಿಯಲ್ಲಿ ಸೆಮಿಫೈನಲ್ಗೆ ಅಫ್ಘಾನಿಸ್ತಾನ ಎಂಟ್ರಿ
- ಟಿ-20 ವಿಶ್ವಕಪ್ ಟೂರ್ನಿಯಿಂದ ಹೊರಬಿದ್ದ ಆಸ್ಟ್ರೇಲಿಯಾ
ಟಿ20 ವಿಶ್ವಕಪ್ನ ಸೂಪರ್ 8 ಹಂತದ ಕೊನೆಯ ಪಂದ್ಯದಲ್ಲಿ ನಾಯಕ, ಸ್ಪಿನ್ನರ್ ರಶೀದ್ ಖಾನ್ ಕೈಚಳಕದಿಂದ ಬಾಂಗ್ಲಾದೇಶದ ವಿರುದ್ಧ 9 ರನ್ ಅಂತರದ ಗೆಲುವು ಸಾಧಿಸುವ ಮೂಲಕ ಅಫ್ಘಾನಿಸ್ತಾನ ಸೆಮಿ ಫೈನಲ್ ಪ್ರವೇಶಿಸಿದೆ. ಬಾಂಗ್ಲಾದೇಶ ಹಾಗೂ ಆಸ್ಟ್ರೇಲಿಯಾ ತಂಡಗಳು ಟೂರ್ನಿಯಿಂದ ಹೊರಬಿದ್ದಿವೆ. ಅಫ್ಘಾನಿಸ್ತಾನ ತಂಡವು ಇದೇ ಮೊದಲ ಬಾರಿಗೆ ವಿಶ್ವಕಪ್ ಸೆಮಿ ಫೈನಲ್ ಪ್ರವೇಶಿಸಿ ದಾಖಲೆ ಸೃಷ್ಟಿಸಿದೆ.
ಕ್ರಿಕೆಟ್ ಟೂರ್ನಿಯಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ ತಂಡವು ನಿಗದಿತ 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 115 ರನ್ ಗಳಿಸಿತು. ಗೆಲ್ಲಲು ಬಾಂಗ್ಲಾದೇಶಕ್ಕೆ 116 ರನ್ಗಳ ಗುರು ನಿಗದಿಯಾಗಿದ್ದರೂ ಮಳೆಯಿಂದಾಗಿ ಪಂದ್ಯಕ್ಕೆ ಅಡಚಣೆಯಾಗಿ ಓವರ್ಗಳನ್ನು 19ಕ್ಕೆ ಕಡಿತಗೊಳಿಸಲಾಯಿತು. ಗೆಲುವಿನ ಗುರಿ ಕೂಡ 114ಕ್ಕೆ ಪರಿಷ್ಕರಿಸಲಾಯಿತು.