- ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ರೋಚಕ ಗೆಲುವು
- ಭಾರತ ತಂಡಕ್ಕೆ ಮೋದಿ ಸೇರಿ ಹಲವು ಗಣ್ಯರ ಅಭಿನಂದನೆ
ದಕ್ಷಿಣ ಆಫ್ರಿಕಾ ವಿರುದ್ಧ ರೋಚಕ ಗೆಲುವು ಸಾಧಿಸಿ 17 ವರ್ಷಗಳ ಬಳಿಕ ಟಿ 20 ವಿಶ್ವಕಪ್ ಟ್ರೋಫಿ ಗೆದ್ದ ಭಾರತ ತಂಡಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಅಭಿನಂದನೆ ತಿಳಿಸಿದ್ದಾರೆ.
ಈ ಕುರಿತು ಪ್ರಧಾನಿ ಮೋದಿ ಅವರು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದು, ಚಾಂಪಿಯನ್ಸ್ ನಮ್ಮ ತಂಡವು ಟಿ 20 ವಿಶ್ವಕಪ್ ಟ್ರೋಫಿಯನ್ನು ತವರಿಗೆ ತಂದಿದ್ದಾರೆ. ಭಾರತ ಕ್ರಿಕೆಟ್ ತಂಡದ ಬಗ್ಗೆ ನಮಗೆ ಹೆಮ್ಮೆ ಇದೆ. ಈ ಪಂದ್ಯ ಐತಿಹಾಸಿಕವಾಗಿತ್ತು ಎಂದು ಅಭಿನಂದನೆ ಸಲ್ಲಿಸಿದ್ದಾರೆ.
T20 ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ ನನ್ನ ಹೃತ್ಫೂರ್ವಕ ಅಭಿನಂದನೆಗಳು. ಪಂದ್ಯಗಳ ಕಷ್ಟಕರ ಸಂದರ್ಭಗಳಲ್ಲಿ ತಂಡ ಉತ್ಸಾಗ ಕಳೆದುಕೊಳ್ಳದೆ, ಪಂದ್ಯಾವಳಿಯ ಉದ್ದಕ್ಕೂ ಅತ್ಯುತ್ತಮ ಕೌಶಲ್ಯಗಳನ್ನು ಪ್ರದರ್ಶಿಸಿ, ಅಂತಿಮ ಪಂದ್ಯದಲ್ಲಿ ಅಸಾಮಾನ್ಯ ಗೆಲುವು ಸಾಧಿಸಿದೆ. ಟೀಂ ಇಂಡಿಯಾ ನಾವು ನಿಮ್ಮ ಬಗ್ಗೆ ಹೆಮ್ಮೆ ಪಡುತ್ತೇವೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅಭಿನಂದಿಸಿದ್ದಾರೆ.
ಟಿ 20 ವಿಶ್ವಕಪ್ ಟೂರ್ನಿಯುದ್ದಕ್ಕೂ ಅದ್ಭುತ ಪ್ರದರ್ಶನ ನೀಡಿ ಗೆಲುವು ಸಾಧಿಸಿದ ಟೀಂ ಇಂಡಿಯಾಗೆ ಅಭಿನಂದನೆಗಳು. ಸೂರ್ಯಕುಮಾರ್ ಎಂತಹ ಅದ್ಭುತ ಕ್ಯಾಚ್, ರೋಹಿತ್, ಈ ಗೆಲುವು ನಿಮ್ಮ ನಾಯಕತ್ವಕ್ಕೆ ಸಾಕ್ಷಿಯಾಗಿದೆ. ರಾಹುಲ್ ದ್ರಾವಿಡ್, ಟೀಂ ಇಂಡಿಯಾಗೆ ನಿಮ್ಮ ಮಾರ್ಗದರ್ಶನ ಕೊರತೆ ಕಾಡಲಿದೆ ಎಂದು ನನಗೆ ತಿಳಿದಿದೆ. ಮೆನ್ ಇನ್ ಬ್ಲೂ ನಮ್ಮ ದೇಶಕ್ಕೆ ಹೆಮ್ಮೆ ತಂದಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಾಮಾಜಿಕ ಜಾಲತಾಣ “ಎಕ್ಸ್ನಲ್ಲಿ” ಬರೆದುಕೊಂಡಿದ್ದಾರೆ.