- ಟಿ20 ವಿಶ್ವಕಪ್ ಗೆದ್ದು ಬೀಗಿದ ಟೀಂ ಇಂಡಿಯಾ
- T-20 ಅಂತಾರಾಷ್ಟ್ಟ್ರೀಯ ಕ್ರಿಕೆಟ್ಗೆ ವಿರಾಟ್ ಕೊಹ್ಲಿ ನಿವೃತ್ತಿ ಘೋಷಣೆ
- T-20 ಅಂತಾರಾಷ್ಟ್ರೀಯ ಕ್ರಿಕೆಟ್ಗೆ ರೋಹಿತ್ ಶರ್ಮಾ ನಿವೃತ್ತಿ ಘೋಷಣೆ
ಭಾರತ ತಂಡವು 17 ವರ್ಷಗಳ ಬಳಿಕ ಟಿ20 ವಿಶ್ವಕಪ್ ಗೆದ್ದುಕೊಂಡಿದೆ. ಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕಾ ವಿರುದ್ಧ 7 ರನ್ಗಳ ರೋಚಕ ಜಯದೊಂದಿಗೆ ವಿಶ್ವಕಪ್ ಕಿರೀಟ ಮುಡಿಗೇರಿಸಿಕೊಂಡಿದೆ. ಟಿ20 ವಿಶ್ವಕಪ್ ಗೆದ್ದ ಬೆನ್ನಲ್ಲೇ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಟಿ20 ಅಂತಾರಾಷ್ಟ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ. ಇದರೊಂದಿಗೆ ಭಾರತದ ಇಬ್ಬರು ದಿಗ್ಗಜರ ಟಿ20ಐ ಕೆರಿಯರ್ ಅಂತ್ಯವಾದಂತಾಗಿದೆ.
ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಬಾರಿಸಿದ ವಿರಾಟ್ ಕೊಹ್ಲಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದಿದ್ದರು. ಈ ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಾತನಾಡಿದ ಕಿಂಗ್ ಕೊಹ್ಲಿ, ಇದುವೇ ನನ್ನ ಕೊನೆಯ ಟಿ20 ವಿಶ್ವಕಪ್ ಟೂರ್ನಿ. ಈ ಗೆಲುವಿನೊಂದಿಗೆ ಟಿ20 ಅಂತಾರಾಷ್ಟ್ರೀಯ ಕೆರಿಯರ್ ಅಂತ್ಯಗೊಳಿಸಲು ಬಯಸಿದ್ದೇನೆ ಎಂದು ತಿಳಿಸಿದರು.
ಇನ್ನು ವಿಶ್ವಕಪ್ ಬಳಿಕ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡ ರೋಹಿತ್ ಶರ್ಮಾ, ನಾನು ಟಿ20 ಪಂದ್ಯದೊಂದಿಗೆ ಭಾರತದ ಪರ ವೃತ್ತಿಜೀವನ ಆರಂಭಿಸಿದ್ದೆ. ಇದೀಗ ಟಿ20 ಅಂತಾರಾಷ್ಟ್ರೀಯ ಕೆರಿಯರ್ಗೆ ವಿದಾಯ ಹೇಳಲು ಇದಕ್ಕಿಂತ ಉತ್ತಮ ಸಮಯವಿಲ್ಲ. ಹೀಗಾಗಿ ಈ ಸ್ವರೂಪದ ಕ್ರಿಕೆಟ್ಗೆ ವಿದಾಯ ಹೇಳುತ್ತಿರುವುದಾಗಿ ರೋಹಿತ್ ಶರ್ಮಾ ತಿಳಿಸಿದ್ದಾರೆ.