ನ್ಯೂಯಾರ್ಕ್ನಲ್ಲಿ ನಡೆದ ಐರ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದು ಬೀಗಿದೆ. ನಸ್ಸೌ ಕೌಂಟಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡವು ಬೌಲಿಂಗ್ ಆಯ್ದುಕೊಂಡಿತು. ನಿರೀಕ್ಷೆಯಂತೆ ಬೌಲರ್ಗಳ ಬಿಗು ದಾಳಿಗೆ ಸಾಕ್ಷಿಯಾಗಿದ್ದ ಈ ಪಂದ್ಯದಲ್ಲಿ ಐರ್ಲೆಂಡ್ ಬ್ಯಾಟರ್ಗಳು ಕ್ರೀಸ್ ಕಚ್ಚಿ ನಿಲ್ಲಲು ಪರದಾಡಿದರು.
ಮೂರನೇ ಓವರ್ನಲ್ಲಿ 2 ವಿಕೆಟ್ ಕಬಳಿಸುವ ಮೂಲಕ ಆರ್ಷದೀಪ್ ಸಿಂಗ್ ಐರ್ಲೆಂಡ್ಗೆ ಆರಂಭಿಕ ಆಘಾತ ನೀಡಿದರೆ, ಆ ಬಳಿಕ ಹಾರ್ದಿಕ್ ಪಾಂಡ್ಯ, ಮೊಹಮ್ಮದ್ ಸಿರಾಜ್ ಹಾಗೂ ಜಸ್ಪ್ರೀತ್ ಬುಮ್ರಾ ಕೂಡ ಉತ್ತಮ ದಾಳಿ ಮಾಡಿದರು. ಪರಿಣಾಮ 44 ರನ್ಗಳಿಸುವಷ್ಟರಲ್ಲಿ ಐರ್ಲೆಂಡ್ ತಂಡವು 5 ವಿಕೆಟ್ ಕಳೆದುಕೊಂಡಿತ್ತು.
ಈ ಹಂತದಲ್ಲಿ ಡೆಲಾನಿ 14 ಎಸೆತಗಳಲ್ಲಿ 26 ರನ್ ಬಾರಿಸುವ ಮೂಲಕ ತಂಡಕ್ಕೆ ಆಸರೆಯಾಗಿ ನಿಂತರು. ಇದಾಗ್ಯೂ 16 ಓವರ್ಗಳಲ್ಲಿ ಐರ್ಲೆಂಡ್ ತಂಡವನ್ನು 96 ರನ್ಗಳಿಗೆ ಆಲೌಟ್ ಮಾಡುವಲ್ಲಿ ಟೀಮ್ ಇಂಡಿಯಾ ಬೌಲರ್ಗಳು ಯಶಸ್ವಿಯಾದರು. ಟೀಮ್ ಇಂಡಿಯಾ ಪರ ಹಾರ್ದಿಕ್ ಪಾಂಡ್ಯ 3 ವಿಕೆಟ್ ಕಬಳಿಸಿದರೆ, ಅರ್ಷದೀಪ್ ಸಿಂಗ್ ಮತ್ತು ಜಸ್ಪ್ರೀತ್ ಬುಮ್ರಾ ತಲಾ 2 ವಿಕೆಟ್ ಕಬಳಿಸಿ ಮಿಂಚಿದರು.