- ಟಿ-20 ವಿಶ್ವಕಪ್ ಟೂರ್ನಿಗೆ ಕೌಂಟ್ಡೌನ್ ಶುರು
- ಜೂನ್ 9 ರಂದು ಭಾರತ – ಪಾಕಿಸ್ತಾನ ನಡುವಿನ ಹೈ-ವೋಲ್ಟೇಜ್ ಪಂದ್ಯ
- ಭಾರತ – ಪಾಕಿಸ್ತಾನ ಪಂದ್ಯಕ್ಕೆ ಉಗ್ರರರ ಆತಂಕ
ವೆಸ್ಟ್ ವಿಂಡೀಸ್ ಹಾಗೂ ಅಮೆರಿಕದಲ್ಲಿ ನಡೆಯುವ ಟಿ-20 ವಿಶ್ವಕಪ್ ಟೂರ್ನಿಗೆ ಕೌಂಟ್ಡೌನ್ ಶುರುವಾಗಿದೆ. ಭಾರತ ಹಾಗೂ ಪಾಕಿಸ್ತಾನ ನಡುವಿನ ಹೈ-ವೋಲ್ಟೇಜ್ ಪಂದ್ಯ ಜೂನ್ 9 ರಂದು ನಡೆಯಲಿದ್ದು, ಈ ಪಂದ್ಯಕ್ಕೆ ಉಗ್ರರ ಅತಂಕ ಶುರುವಾಗಿದೆ. ಇನ್ನು ಕ್ರಿಕೆಟ್ ಅಭಿಮಾನಿಗಳೂ ಈ ಪಂದ್ಯ ಕಣ್ತುಂಬಿಕೊಳ್ಳಲು ಕಾತುರದಿಂದ ಕಾಯುತ್ತಿದ್ದಾರೆ.
ಭಾರತ ಮತ್ತು ಪಾಕಿಸ್ತಾನ ನಡುವಿನ ಈ ಪಂದ್ಯಕ್ಕೆ ಉಗ್ರರು ದಾಳಿ ಮಾಡುವ ಎಚ್ಚರಿಕೆ ನೀಡಿದ್ದಾರೆ. ಐಸಿಸ್-ಕೆ ಹೆಸರಿನ ಭಯೋತ್ಪಾದಕ ಸಂಘಟನೆಯು “ಲೋನ್ ವುಲ್ಫ್ “ ದಾಳಿ ನಡೆಸುವುದಾಗಿ ಘೋಷಿಸಿದ್ದು, ಇದರ ಬೆನ್ನಲ್ಲೆ ನ್ಯೂಯಾರ್ಕ್ ನಗರದಾದ್ಯಂತ ಪೊಲೀಸ್ ಭದ್ರತಾ ವ್ಯವಸ್ಥೆ ಮತ್ತಷ್ಟು ಹೆಚ್ಚಿಸಲಾಗಿದೆ.