ಟಿ 20 ವಿಶ್ವಕಪ್ಗಾಗಿ ಟೀಂ ಇಂಡಿಯಾದ ಹೊಸ ಜೆರ್ಸಿಯನ್ನು ಸೋಮವಾರ ಅನಾವರಣಗೊಳಿಸಲಾಗಿದೆ. ಅಡಿಡಾಸ್ ಪ್ರಯೋಜಕತ್ವದಲ್ಲಿ ಮೂಡಿಬಂದಿರುವ ನೂತನ ಜೆರ್ಸಿಯಲ್ಲಿ ನೀಲಿ ಹಾಗೂ ಕೇಸರಿ ಬಣ್ಣಗಳನ್ನು ಮುಖ್ಯ ಬಣ್ಣಗಳಾಗಿ ಬಳಸಲಾಗಿದೆ.
ಅಡಿಡಾಸ್ ಕಂಪೆನಿ ಹಿಮಾಚಲ ಪ್ರದೇಶದ ಧರ್ಮಶಾಳಾ ಕ್ರೀಡಾಂಗಣದಲ್ಲಿ ಹೆಲಿಕಾಪ್ಟರ್ ಮೂಲಕ ದೈತ್ಯ ಗಾತ್ರದ ಹೊಸ ಜೆರ್ಸಿಯನ್ನು ಅನಾವರಣ ಮಾಡಲಾಗಿತ್ತು.
ಹೊಸ ಜೆರ್ಸಿಯಲ್ಲಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಉಪನಾಯಕ ಹಾರ್ದಿಕ್ ಪಾಂಡ್ಯ ಅವರ ಎಡಿಟೆಡ್ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗ್ತಿದೆ. ಭಾರತದ ತನ್ನ ಮೊದಲ ಪಂದ್ಯವನ್ನು ಜೂನ್ 5ರಂದು ಐರ್ಲೆಂಡ್ ವಿರುದ್ಧ ಆಡಲಿದೆ. ದ್ವೀತಿಯ ಪಂದ್ಯ ಜೂನ್ 9 ರಂದು ಪಾಕ್ ವಿರುದ್ಧ ಆಡಲಿದ್ದು, ಭಾರತ ತನ್ನ ಎಲ್ಲಾ ಲೀಗ್ ಪಂದ್ಯಗಳನ್ನು ಅಮೆರಿಕಾದಲ್ಲೇ ಆಡಲಿದೆ. ಇದರಲ್ಲಿ ಮೂರು ಪಂದ್ಯಗಳು ನ್ಯೂಯಾರ್ಕ್ ಮತ್ತು ಒಂದು ಪಂದ್ಯ ಫ್ಲೋರಿಡಾದಲ್ಲಿ ನಡೆಯಲಿದೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು ನಡೆದರೆ, ಜೂನ್ 19 ರಿಂದ 24ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ.