ತಮಿಳು ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಬೃಹತ್ ಸಮಾವೇಶವನ್ನು ನಟ ವಿಜಯ್ ಯಶಸ್ವಿಯಾಗಿ ನಿರ್ವಹಿಸಿದ್ದು, ತಮಿಳುನಾಡು ರಾಜಕೀಯದಲ್ಲಿ ಸದ್ಯ ಹೆಚ್ಚು ಸದ್ದು ಮಾಡುತ್ತಿದ್ದಾರೆ. ಇದರ ಬೆಳವಣಿಗೆ ಬೆನ್ನ ಹಿಂದೆ ಇದೀಗ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಅವರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸುವಂತೆ ಪಕ್ಷದ ಒಂದು ಬಣ ಒತ್ತಾಯಿಸಿದೆ.
ಇದನ್ನು ಓದಿ:ಕರ್ನಾಟಕದಲ್ಲಿ ಈರುಳ್ಳಿ ದರ ಮತ್ತೆ ಏರಿಕೆ!
ಕೆ. ಅಣ್ಣಾಮಲೈ ಅವರು ಆಕ್ಸ್ಬರ್ಡ್ ವಿಶ್ವವಿದ್ಯಾನಿಲಯದಲ್ಲಿ ಮೂರು ತಿಂಗಳ ಕಾಲ ಅಂತಾರಾಷ್ಟ್ರೀಯ ಸಂಬಂಧಗಳ ಅಧ್ಯಯನಕ್ಕೆ ತೆರಳಿದ್ದು, ಇದೇ ನವೆಂಬರ್ 28ರಂದು ಚೆನ್ನೈಗೆ ಮರಳುತ್ತಿದ್ದಾರೆ. ಈ ನಡುವೆ ಪಕ್ಷದ ಕೆಲ ನಾಯಕರು ಅಣ್ಣಾಮಲೈ ಅವರನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಕೋರಿ ಹೈಕಮಾಂಡ್ಗೆ ಲಿಖಿತ ಪತ್ರ ಬರೆದಿದ್ದಾರೆ ಎಂದು ವರದಿಯಾಗಿದೆ.
ಇದನ್ನು ಓದಿ:ರಾಯರ ಮಠದಲ್ಲಿ ಡಾಲಿ ಧನಂಜಯ!
ವಿಜಯ್ ಟಿವಿಕೆ ಪಕ್ಷ ಸಕ್ರಿಯ ರಾಜಕೀಯ ಪ್ರವೇಶ ಮಾಡುತ್ತಿದ್ದಂತೆ ತಮಿಳುನಾಡಿನಲ್ಲಿ ಬಿಜೆಪಿಯ ನಿರೀಕ್ಷೆಗಳು ಮಸುಕಾಗಿದೆ. ಹಾಗೇ ಭವಿಷ್ಯದಲ್ಲಿ ಯಶಸ್ಸಿಗೆ ದೃಢವಾದ ರಾಜಕೀಯ ಮೈತ್ರಿ ಕೂಡ ಅಗತ್ಯವಾಗಿದೆ ಎಂದು ವಾದಿಸಿದ್ದಾರೆ. ಮುಂಬರಲಿರುವ ವಿಧಾನಸಭಾ ಚುನಾವಣೆ ಹಿನ್ನೆಲೆ ಬಿಜೆಪಿಯ ಮಾಜಿ ಮಿತ್ರ ಪಕ್ಷವಾದ ಎಐಎಡಿಎಂಕೆಯೊಂದಿಗೆ ಮೈತ್ರಿ ಮಾಡಿಕೊಳ್ಳುವಂತೆ ರಾಷ್ಟ್ರೀಯ ನಾಯಕತ್ವವನ್ನು ಒತ್ತಾಯಿಸಿದ್ದಾರೆ. ಭವಿಷ್ಯದಲ್ಲಿ ಬಿಜೆಪಿಯ ಏಕಾಂಗಿ ಹೋರಾಟ ಪಕ್ಷಕ್ಕೆ ಭಾರೀ ಹಿನ್ನಡೆಯಾಗುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.