- ಬಿಜೆಪಿ ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿಯನ್ನು ರದ್ದುಪಡಿಸಲಾಗುವುದು.
- ಎಸ್ಸಿ, ಎಸ್ಟಿ ಮತ್ತು ಒಬಿಸಿ ಮೀಸಲಾತಿಯನ್ನು ಕಾಂಗ್ರೆಸ್ ಕೊಳ್ಳೆ ಹೊಡೆದಿದೆ.
ಬಿಜೆಪಿ ಅಧಿಕಾರಕ್ಕೆ ಬಂದರೆ ಎಸ್ಸಿ, ಎಸ್ಟಿ ಮತ್ತು ಒಬಿಸಿ ಮೀಸಲಾತಿಯನ್ನು ಹೆಚ್ಚಿಸಲಾಗುವುದು ಮತ್ತು ಮುಸ್ಲಿಂ ಮೀಸಲಾತಿಯನ್ನು ರದ್ದುಪಡಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ತೆಲಂಗಾಣದ ಭೋಂಗಿರ್ನಲ್ಲಿ ಮಾತನಾಡಿದ ಅವರು, ಎಸ್ಸಿ, ಎಸ್ಟಿ ಮತ್ತು ಒಬಿಸಿ ಮೀಸಲಾತಿಯನ್ನು ಕಾಂಗ್ರೆಸ್ ಕೊಳ್ಳೆ ಹೊಡೆದಿದೆ. ಆ ಮೀಸಲಾತಿಯನ್ನು ಕಾಂಗ್ರೆಸ್ ಮುಸ್ಲಿಮರಿಗೆ ನೀಡಿದೆ ಎಂದು ಆರೋಪಿಸಿದ್ದಾರೆ.
ಕಾಂಗ್ರೆಸ್ ಸುಳ್ಳು ಹೇಳುವ ಮೂಲಕ ಚುನಾವಣೆ ಎದುರಿಸಲು ಬಯಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬಂದರೆ ಮೀಸಲಾತಿಯನ್ನು ಮುಗಿಸುವುದಾಗಿ ಕಾಂಗ್ರೆಸ್ ಹೇಳಿದೆ. ಮೋದಿಯವರು ಕಳೆದ 10 ವರ್ಷಗಳಿಂದ ಈ ದೇಶವನ್ನು ಒಮ್ಮತದಿಂದ ಮುನ್ನಡೆಸುತ್ತಿದ್ದಾರೆ. ಆದರೆ ಅವರು ಮೀಸಲಾತಿಯನ್ನ ಕೊನೆಗೊಳಿಸಲಿಲ್ಲ. ಆದರೆ ಕಾಂಗ್ರೆಸ್ ಪಕ್ಷವು ಮುಸ್ಲಿಂರಿಗೆ ಶೇ. 4ರಷ್ಟು ಮೀಸಲಾತಿ ನೀಡುವ ಮೂಲಕ ಎಸ್ಸಿ. ಎಸ್ಟಿ ಮತ್ತು ಒಬಿಸಿ ಮೀಸಲಾತಿಯನ್ನು ದೋಚಿದೆ ಎಂದು ಹೇಳಿದ್ದರು.