- ಗನ್ ತೋರಿಸಿ ಮಹಿಳಾ ಹೆಡ್ ಕಾನ್ಸ್ಟೆಬಲ್ ಮೇಲೆ ಅತ್ಯಾಚಾರ
- ಮಹಿಳಾ ಹೆಡ್ ಕಾನ್ಸ್ಟೆಬಲ್ ದೂರಿನ ಆಧಾರದ ಮೇಲೆ ಎಸ್ಐ ವಿರುದ್ಧ ಕ್ರಮ
ಗನ್ ತೋರಿಸಿ ಮಹಿಳಾ ಹೆಡ್ ಕಾನ್ಸ್ಟೆಬಲ್ ಮೇಲೆ ಅತ್ಯಾಚಾರ ಮಾಡಿದ ಎಸ್ಐ. ಸಾರ್ವಜನಿಕರನ್ನು ರಕ್ಷಣೆ ಮಾಡುವ ರಕ್ಷಕರಿಗೆ ರಕ್ಷಣೆ ಇಲ್ಲ, ತೆಲಂಗಾಣದಲ್ಲಿ ಮಹಿಳಾ ಹೆಡ್ ಕಾನ್ಸ್ಟೆಬಲ್ ಮೇಲೆ ತನ್ನ ಮೇಲಾಧಿಕಾರಿ ಅತ್ಯಾಚಾರ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಮಹಿಳಾ ಹೆಡ್ ಕಾನ್ಸ್ಟೆಬಲ್ ದೂರಿನ ಆಧಾರದ ಮೇಲೆ ಎಸ್ಐ ವಿರುದ್ಧ ಕ್ರಮವನ್ನು ತೆಗೆದುಕೊಳ್ಳಲಾಗಿದೆ. ಹಾಗೂ ಅವರನ್ನು ಅಧಿಕಾರದಿಂದ ವಜಾಗೊಳಿಸಲಾಗಿದೆ.
ತೆಲಂಗಾಣದಲ್ಲಿ ಸಾರ್ವಜನಿಕರನ್ನು ರಕ್ಷಣೆ ಮಾಡುವ ಪೊಲೀಸರ ಮೇಲೆಯೇ ಅತ್ಯಾಚಾರ ಮಾಡಿರುವ ಅವಮಾನೀಯ ಘಟನೆಯೊಂದು ನಡೆದಿದೆ. ಜಯಶಂಕರ್ ಭೂಪಾಲಪಲ್ಲಿ ಜಿಲ್ಲೆಯಲ್ಲಿ ಮಹಿಳಾ ಹೆಡ್ ಕಾನ್ಸ್ಟೆಬಲ್ಗೆ ಗನ್ ತೋರಿಸಿ ಅತ್ಯಾಚಾರ ಮಾಡಲಾಗಿದೆ. ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಬಂಧಿಸಲಾಗಿದೆ.
ಜಿಲ್ಲೆಯ ಕಾಳೇಶ್ವರಂ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಭವಾನಿ ಸೇನ್ ಎಂಬ ಸಬ್ ಇನ್ಸ್ಪೆಕ್ಟರ್ ಈ ಕೃತ್ಯವನ್ನು ಮಾಡಿದ್ದಾನೆ ಎಂದು ಹೇಳಲಾಗಿದೆ. ಆಕೆ ನೀಡಿದ ದೂರಿನಲ್ಲಿ ನೀರಾವರಿ ಯೋಜನೆಯ ವಸತಿ ಸೌಲಭ್ಯದ ಅತಿಥಿ ಕೊಠಡಿಯಲ್ಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಹೇಳಿದ್ದಾರೆ. ಎಸ್ಐ ರಿವಾಲ್ವರ್ ತೋರಿಸಿ ಬೆದರಿಸಿ ಅತ್ಯಾಚಾರವೆಸಗಿದ್ದಾನೆ. ನಂತರ ಈ ವಿಚಾರವನ್ನು ಯಾರಿಗೂ ಹೇಳಬಾರದು ಎಂದು ಬೆದರಿಕೆ ಹಾಕಿದ್ದಾನೆ ಎಂದು ಹೆಡ್ ಕಾನ್ಸ್ಟೆಬಲ್ ಆರೋಪಿಸಿದರು.