ಭಾರತದಲ್ಲಿ ಪ್ರತಿ ವರ್ಷ ಜನವರಿ 24 ರಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ಆಚರಿಸಲಾಗುತ್ತದೆ. ಇದನ್ನು 2008 ರಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ ಮತ್ತು ಭಾರತ ಸರ್ಕಾರವು ಭಾರತೀಯ ಸಮಾಜದಲ್ಲಿ ಹುಡುಗಿಯರು ಎದುರಿಸುತ್ತಿರುವ ಅಸಮಾನತೆಗಳ ಬಗ್ಗೆ ಸಾರ್ವಜನಿಕ ಜಾಗೃತಿಯನ್ನು ಹರಡಲು ಪ್ರಾರಂಭಿಸಿತು.
ಬೆಂಗಳೂರು ರಾಜ್ಯದಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯನ್ನು ವಿಶಿಷ್ಟವಾಗಿ ಆಚರಿಸುವ ಜತೆಗೆ ಹೆಣ್ಣು ಭ್ರೂಣ ಹತ್ಯೆಯ ವಿರುದ್ಧ ಜಾಗೃತಿ ಮೂಡಿಸಲು ಶುಕ್ರವಾರ ರಾಜ್ಯಾದ್ಯಂತ ಎಲ್ಲ ಜಿಲ್ಲಾಸ್ಪತ್ರೆಗಳಿಗೆ ಗುಲಾಬಿ ಬಣ್ಣದ ದೀಪಾಲಂಕಾರ (ಪಿಂಕ್ ಲೈಟಿಂಗ್) ಮಾಡಲು ಆರೋಗ್ಯ ಇಲಾಖೆ ನಿರ್ಧರಿಸಿದೆ.
ಇದೇ ವೇಳೆ ರಾಜ್ಯದ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಶುಕ್ರವಾರ ಜನಿಸುವ ಹೆಣ್ಣು ಮಕ್ಕಳಿಗೆ 1 ಸಾವಿರ ರು. ಮೌಲ್ಯದ ಮಕ್ಕಳ ಕಿಟ್ನ್ನು ವಿಶೇಷ ಉಡುಗೊರೆ ಆಗಿ ನೀಡುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ.
ಈ ಬಗ್ಗೆ ಮಾತನಾಡಿರುವ ಸಚಿವರು, ಹೆಣ್ಣು ಮಗುವಿನ ಜನ್ಮವನ್ನು ಸಂಭ್ರಮಿಸಲು ಜ.24 ರಂದು ಸರ್ಕಾರಿ ಆಸ್ಪತ್ರೆಗಳಲ್ಲಿ ಹೆಣ್ಣುಮಗುವಿಗೆ ಜನ್ಮನೀಡುವ ತಾಯಂದಿರು ಹಾಗೂ ಕುಟುಂಬ ವರ್ಗಕ್ಕೆ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಲಾಗುತ್ತದೆ ಎಂದು ಹೇಳಿದರು.
ಹೆಣ್ಣುಮಕ್ಕಳ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಅನಿಮೀಯಾ ಮುಕ್ತ ಪೌಷ್ಟಿಕ ಕರ್ನಾಟಕ ಯೋಜನೆ ಅನುಷ್ಠಾನದಮೂಲಕ ಹೆಣ್ಣುಮಕ್ಕಳ ರಕ್ತ ಹೀನತೆ ನೀಗಿಸುವ ಕೆಲಸ ಮಾಡಲಾಗುತ್ತಿದೆ. ಶುಚಿ ಯೋಜನೆ, ಜನನಿ ಸುರಕಾ ಯೋಜನೆಗಳನ್ನ ಜಾರಿಗೊಳಿಸಲಾಗುತ್ತಿದ್ದು, ವಿಶೇಷ ವಿಶೇಷವಾಗಿ ಹೆಣ್ಣುಭ್ರೂಣ ಹತ್ಯೆ ನಡೆಸುವವರ ವಿರುದ್ದ ದಾಳಿಗಳನ್ನು ನಡೆಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.
ಕಾನೂನಿಗೆ ವಿರುದ್ದವಾಗಿ ಲಿಂಗಪತ್ತೆ, ಭ್ರೂಣಹತ್ಯೆಗೆ ನೆರವಾಗಿರುವ ಸ್ಕ್ಯಾನಿಂಗ್ ಕೇಂದ್ರದ ಮಾಲೀಕರು, ವೈದ್ಯರ ವಿರುದ್ಧ 136 ಪ್ರಕರಣಗಳನ್ನು ನ್ಯಾಯಾಲಯದಲ್ಲಿ ಹೂಡಲಾಗಿದ್ದು, 747 ಪ್ರಕರಣಗಳಲ್ಲಿ ನ್ಯಾಯಾಲಯವು ದಂಡ ವಿಧಿಸಿದೆ. ಭ್ರೂಣ ಪತ್ತೆ ಮಾಡುತ್ತಿರುವ ಬಗ್ಗೆ ಮಾಹಿತಿ ನೀಡಿ ಪ್ರಕರಣ ದಾಖಲಿಸಲು ಸಹಕರಿಸುವವರಿಗೆ 1 ಲಕ್ಷ ರು. ಬಹುಮಾನ ಘೋಷಿಸಿದ್ದು, ಇನ್ನೂ ಹಲವು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಗ್ಯಾರಂಟಿ ನ್ಯೂಸ್ ವಾಟ್ಸಾಪ್ ಚಾನೆಲ್ ಫಾಲೋ ಮಾಡಿ: https://whatsapp.com/channel/0029VafyCqRFnSzHn1JWKi1B
ಜೊತೆಯಲ್ಲೇ ಗ್ಯಾರಂಟಿ ನ್ಯೂಸ್ ಸಮುದಾಯವನ್ನು ಸೇರಲು ಈ ಲಿಂಕ್ ಕ್ಲಿಕ್ಕಿಸಿ: https://chat.whatsapp.com/HWayJDSBf9aI06q6jplPgc