ಕರ್ನಾಟಕ ರಾಜ್ಯ ಕರಾವಳಿ ಜನರ ಅತ್ಯಂತ ಜನಪ್ರಿಯ ಕ್ರೀಡೆಯಾಗಿರುವ ಕಂಬಳಕ್ಕೆ ರಾಜ್ಯಕ್ಕೆ ಸರ್ಕಾರ ಗುಡ್ ನ್ಯೂಸ್ ಒಂದನ್ನು ನೀಡಿದೆ.
ಪ್ರತೀ ಕಂಬಳಕ್ಕೆ 5 ಲಕ್ಷ ಅನುದಾನ
ನಾಡಿನ ಕಂಬಳ ಪ್ರಿಯರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ ನೀಡಿದೆ. ಕರಾವಳಿಯ ಪ್ರತೀ ಕಂಬಳಕ್ಕೂ 5 ಲಕ್ಷ ರೂಪಾಯಿ ನೀಡಲು ಸರ್ಕಾರ ಆದೇಶ ಹೊರಡಿಸಿದೆ. ಕಳೆದ ವರ್ಷದ ಕಂಬಳಕ್ಕೆ ರಾಜ್ಯ ಸರ್ಕಾರ ಅನುದಾನ ನೀಡಿರಲಿಲ್ಲ. ಈ ಬಗ್ಗೆ ಕಂಬಳಪ್ರಿಯರು ಬೇಸರ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ನಡೆದ ಅಧಿವೇಶನದಲ್ಲೂ ಕರಾವಳಿಯ ಶಾಸಕರು ಬೇಡಿಕೆ ಸಲ್ಲಿಸಿದ್ದರು.
ಮುಖ್ಯಮಂತ್ರಿಗಳ ಶಿಫಾರಸ್ಸಿನ ಮೇರೆಗೆ ಆದೇಶ
ಸ್ವತಹ ಸ್ಪೀಕರ್ ಯುಟಿ ಖಾದರ್ ಅವರೇ ಕಂಬಳ ಪರ ಬ್ಯಾಟಿಂಗ್ ಮಾಡಿದ್ದರು. ಸರ್ಕಾರ ನೆರವು ಕೊಡದಿದ್ದರೆ ನಾವೇ ಹಣ ಸಂಗ್ರಹಿಸಿ ಕಂಬಳ ಮಾಡಲು ಗೊತ್ತು ಎಂದು ಚಾಟಿ ಬೀಸಿದ್ದರು. ಯು.ಟಿ.ಖಾದರ್ ಚಾಟಿ ಬೀಸಿದ ಬೆನ್ನಲ್ಲೇ ಕಂಬಳಕ್ಕೆ ಅನುದಾನ ಬಿಡುಗಡೆಗೆ ಆದೇಶ ಮಾಡಿದ್ದಾರೆ. ಮುಖ್ಯಮಂತ್ರಿಗಳ ಶಿಫಾರಸ್ಸಿನ ಮೇರೆಗೆ ಪ್ರವಾಸೋದ್ಯಮ ಸಚಿವ ಹೆಚ್.ಕೆ ಪಾಟೀಲ್ ಆದೇಶ ಹೊರಡಿಸಿದ್ದಾರೆ.
50 ಲಕ್ಷ ಅನುದಾನ ಬಿಡುಗಡೆಗೆ ಒತ್ತಾಯ
ಒಟ್ಟು 25 ಕಂಬಳಗಳು ನಡೆಯುತ್ತವೆ. ಪ್ರತೀ ಕಂಬಳವನ್ನು ನೇರವಾಗಿ ಒಂದು ಲಕ್ಷ ಜನ ವೀಕ್ಷಿಸುತ್ತಾರೆ. 2020 21ನೇ ಸಾಲಿನಲ್ಲಿ 10 ಉಡುಪಿ ಜಿಲ್ಲೆಯ 10 ಕಂಬಳಗಳಿಗೆ ತಲಾ 5 ಲಕ್ಷ ಅನುದಾನ ಬಿಡುಗಡೆ ಮಾಡಲಾಗಿತ್ತು. ಉಡುಪಿ ಜಿಲ್ಲೆಯಲ್ಲಿ ನಡೆಯುವ 53 ಸಾಂಪ್ರದಾಯಿಕ ಕಂಬಳ ಗಳಿಗೂ ಅನುದಾನ ಕೋರಲಾಗಿತ್ತು. ಕಳೆದ ವರ್ಷ 50 ಲಕ್ಷ ಘೋಷಿಸಿ ಸರಕಾರ ಅನುದಾನ ನೀಡಿರಲಿಲ್ಲ, ಘೋಷಣೆಯಾದ 50 ಲಕ್ಷ ಬಿಡುಗಡೆಗೆ ಒತ್ತಾಯಿಸಿರುವ ಕಂಬಳ ಸಮಿತಿ. ಅದಲ್ಲದೆ ಸಾಂಪ್ರದಾಯಿಕ ಕಂಬಳಗಳಿಗೂ 50 ಲಕ್ಷ ಬಿಡುಗಡೆ ಮಾಡುವಂತೆ ಸಮಿತಿ ಒತ್ತಾಯಿಸಿದೆ. ಕರಾವಳಿಯ ನಂತರ ಬೆಂಗಳೂರಿನಲ್ಲೂ ತುಳುನಾಡ ಕಂಬಳ ಸದ್ದು ಮಾಡಿತ್ತು.