ತಿರುವನಂತಪುರಂ: ಕೇರಳದ ಹಲವು ಕಡೆಗಳಲ್ಲಿ ಗಾಳಿ ಸಹಿತ ಮಳೆ ಮುಂದುವರೆದಿದ್ದು, ಮುನ್ನೆ ಚ್ಚರಿಕೆ ಕ್ರಮವಾಗಿ 7 ಜಿಲ್ಲೆಯ ಶಾಲಾ- ಕಾಲೇಜು ಗಳಿಗೆ ಸೋಮವಾರ ರಜೆ ಘೋಷಿಸಲಾಗಿತ್ತು. ತ್ರಿಶೂರ್, ಮಲಪ್ಪುರಂ, ಕಲ್ಲಿಕೋಟೆ, ಕಣ್ಣೂರು, ಕಾಸರಗೋಡು, ಎರ್ನಾಕುಲಂ, ವಯನಾಡು ಜಿಲ್ಲೆಗಳ ಶಿಕ್ಷಣ ಸಂಸ್ಥೆಗಳಿಗೆ ರಜೆ ನೀಡಲಾಗಿತ್ತು. ಕೇರಳದಲ್ಲಿ ಕಳೆದೆರೆಡು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು ಆಸ್ತಿ ಪಾಸ್ತಿ ನಷ್ಟವಾಗಿವೆ. ಇಂದು ಕೂಡ ಮಳೆ ಮುಂದುವರೆಯಲಿದ್ದು 11ರಿಂದ 20 ಸೆಂ.ಮೀ. ಮಳೆ ಬೀಳಬಹುದು. ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಹವಾಮಾನ ಇಲಾಖೆ ಹೇಳಿದೆ.