ತಿಪಟೂರು ತಾಲೂಕಿನ ಹುಚ್ಚನಹಟ್ಟಿ ಗ್ರಾಮದ ಸಮೀಪ ನಡೆಯುತ್ತಿರುವ ಎತ್ತಿನಹೊಳೆ ಕಾಮಗಾರಿ ಗುಂಡಿಯಲ್ಲಿ ಕಾಣೆಯಾಗಿದ್ದ ಇಬ್ಬರು ಮಕ್ಕಳು ಶವವಾಗಿ ಪತ್ತೆಯಾಗಿದ್ದಾರೆ. ಎರಡನೇ ತರಗತಿ ಮತ್ತು ನಾಲ್ಕನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಬಾಲಕರು ಮೃತರೆಂದು ತಿಳಿದು ಬಂದಿದೆ.
ಇದನ್ನು ಓದಿ: ಜಮ್ಮು- ಕಾಶ್ಮೀರದಲ್ಲಿ ಎನ್ಕೌಂಟರ್: ಇಬ್ಬರು ಉಗ್ರರ ಹತ್ಯೆ!
ಇಬ್ಬರೂ ನಿನ್ನೆ ಸಂಜೆ 7 ಗಂಟೆಯಿಂದ ಕಾಣೆಯಾಗಿದ್ದರು. ಇಂದು ಬೆಳಗ್ಗೆ ಎತ್ತಿನಹೊಳೆ ಕಾಮಗಾರಿ ಮಾಡುತ್ತಿರುವ ಗುಂಡಿಯಲ್ಲಿ ಶವಗಳು ಸಿಕ್ಕಿವೆ. ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಹಾಗೂ ಕುಟುಂಬದವರು ಸ್ಥಳದಲ್ಲಿಯೇ ಶವಗಳನ್ನಿಟ್ಟು ಪ್ರತಿಭಟಿಸಿ, ಕಾಮಗಾರಿ ನಡೆಸುತ್ತಿರುವ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.