ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಅವರ ಬಹು ನಿರೀಕ್ಷಿತ ಚಿತ್ರ ‘ಪುಷ್ಪ 2’ ಡಿಸೆಂಬರ್ 5ಕ್ಕೆ ತೆರೆಕಾಣಲಿದೆ. ಇದರ ಬೆನ್ನಲ್ಲೇ ಆಂಧ್ರಪ್ರದೇಶ ಡಿಸಿಎಂ ಪವನ್ ಕಲ್ಯಾಣ್ ಅವರಿಗೆ ಧನ್ಯವಾದ ತಿಳಿಸಿದ್ದಾರೆ.
ಅಲ್ಲು ಅರ್ಜುನ್ ಅವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿ, ಟಿಕೆಟ್ ಬೆಲೆ ಹೆಚ್ಚಿಸಲು ಅವಕಾಶ ನೀಡಿದ ಆಂಧ್ರಪ್ರದೇಶ ಸರ್ಕಾರಕ್ಕೆ ಧನ್ಯವಾದ. ಈ ಪ್ರಗತಿಪರ ನಿರ್ಧಾರವು ತೆಲುಗು ಚಿತ್ರರಂಗದ ಬೆಳವಣಿಗೆ ಮತ್ತು ಏಳಿಗೆಗೆ ನೀವು ತೋರುತ್ತಿರುವ ಬದ್ಧತೆಯನ್ನು ತೋರಿಸುತ್ತದೆ ಎಂದಿದ್ದಾರೆ. ಚಿತ್ರರಂಗದ ಕಲ್ಯಾಣಕ್ಕೆ ಸಹಕರಿಸಿದ ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಹಾಗೂ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರಿಗೆ ಧನ್ಯವಾದ ಎಂದು ಅವರು ಬರೆದುಕೊಂಡಿದ್ದಾರೆ.
ಡಿ.5ರಂದು ‘ಪುಷ್ಪ 2’ ಬಹುಭಾಷೆಗಳಲ್ಲಿ ರಿಲೀಸ್ ಆಗಲಿದೆ. ಸುಕುಮಾರ್ ನಿರ್ದೇಶನದ ಈ ಸಿನಿಮಾದಲ್ಲಿ ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ, ಡಾಲಿ ಧನಂಜಯ, ಅನಸೂಯ, ಫಹಾದ್ ಫಾಸಿಲ್, ಶ್ರೀಲೀಲಾ ಸೇರಿದಂತೆ ಅನೇಕ ಸ್ಟಾರ್ ಬಳಗವನ್ನೇ ಹೊಂದಿದೆ.