ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತಾವಂಶಿ ಗ್ರಾಮದ ಬಳಿ ಟ್ರ್ಯಾಕ್ಟರ್ ಮತ್ತು ಕಾರ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಘಟನೆ ತಾವಂಶಿ-ಅನಂತಪೂರ ರಸ್ತೆಯ ಮಧ್ಯೆ ನಡೆದಿದ್ದು, ಅಪಘಾತದಲ್ಲಿ ಕಾರಿನ ಮುಂಭಾಗ ಸಜ್ಜುಗುಜ್ಜಾಗಿದೆ.
ಅಪಘಾತದಲ್ಲಿ ತೆವರಟ್ಟಿ ಗ್ರಾಮದ ನಿವಾಸಿ ಇಲಾಯಿ ತಾಂಬೋಳಿ ಅವರು ಗಂಭೀರವಾಗಿ ಗಾಯಗೊಂಡಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ. ಇನ್ನೊಬ್ಬರು ಜ್ಞಾನೇಶ್ವರ ನಾಯಿಕಗೆ ಗಂಭೀರ ಗಾಯಗಳಾಗಿವೆ. ಇಬ್ಬರೂ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪೊಲೀಸರು ಪ್ರಕರಣವನ್ನು ದಾಖಲಿಸಿ ಮುಂದಿನ ತನಿಖೆ ನಡೆಸುತ್ತಿದ್ದಾರೆ.
ಗ್ಯಾರಂಟಿ ನ್ಯೂಸ್ ವಾಟ್ಸಾಪ್ ಚಾನೆಲ್ ಫಾಲೋ ಮಾಡಿ: https://whatsapp.com/channel/0029VafyCqRFnSzHn1JWKi1B
ಜೊತೆಯಲ್ಲೇ ಗ್ಯಾರಂಟಿ ನ್ಯೂಸ್ ಸಮುದಾಯವನ್ನು ಸೇರಲು ಈ ಲಿಂಕ್ ಕ್ಲಿಕ್ಕಿಸಿ: https://chat.whatsapp.com/HWayJDSBf9aI06q6jplPgc