ಟ್ರ್ಯಾಕ್ಟರ್ ಮತ್ತು ಕಾರು ನಡುವೆ ಭೀಕರ ಅಪಘಾತ: ಇಬ್ಬರಿಗೆ ಗಂಭೀರ ಗಾಯ

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತಾವಂಶಿ ಗ್ರಾಮದ ಬಳಿ ಟ್ರ್ಯಾಕ್ಟರ್ ಮತ್ತು ಕಾರ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಘಟನೆ ತಾವಂಶಿ-ಅನಂತಪೂರ ರಸ್ತೆಯ ಮಧ್ಯೆ ನಡೆದಿದ್ದು, ಅಪಘಾತದಲ್ಲಿ ಕಾರಿನ ಮುಂಭಾಗ ಸಜ್ಜುಗುಜ್ಜಾಗಿದೆ. ಅಪಘಾತದಲ್ಲಿ ತೆವರಟ್ಟಿ ಗ್ರಾಮದ ನಿವಾಸಿ ಇಲಾಯಿ ತಾಂಬೋಳಿ ಅವರು ಗಂಭೀರವಾಗಿ ಗಾಯಗೊಂಡಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ. ಇನ್ನೊಬ್ಬರು ಜ್ಞಾನೇಶ್ವರ ನಾಯಿಕಗೆ ಗಂಭೀರ ಗಾಯಗಳಾಗಿವೆ. ಇಬ್ಬರೂ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪೊಲೀಸರು … Continue reading ಟ್ರ್ಯಾಕ್ಟರ್ ಮತ್ತು ಕಾರು ನಡುವೆ ಭೀಕರ ಅಪಘಾತ: ಇಬ್ಬರಿಗೆ ಗಂಭೀರ ಗಾಯ