ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಇಂದು ‘ನಡೆದಾಡುವ ದೇವರು’, ಪರಮಪೂಜ್ಯ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳ ಪುಣ್ಯಸ್ಮರಣೆಯ ಅಂಗವಾಗಿ ಸಿದ್ದಗಂಗಾಮಠಕ್ಕೆ ಭೇಟಿ ನೀಡಿ, ಪೂಜ್ಯರ ಗದ್ದುಗೆಯ ದರ್ಶನ ಪಡೆದು ಪೂಜೆ ಸಲ್ಲಿಸಿದರು.
ನಂತರ ಪೂಜ್ಯ ಕಿರಿಯ ಶ್ರೀಗಳಾದ ಪರಮಪೂಜ್ಯ ಸಿದ್ದಲಿಂಗ ಮಹಾಸ್ವಾಮಿಗಳವರ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಶಾಸಕರಾದ ಬಿ.ಸುರೇಶ್ ಗೌಡ, ಜಿ.ಬಿ.ಜ್ಯೋತಿಗಣೇಶ್, ಜಿಲ್ಲಾಧ್ಯಕ್ಷ ರವಿಶಂಕರ್ ಹೆಬ್ಬಾಕ, ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಎಂ.ರುದ್ರೇಶ್, ಡಾ.ಪರಮೇಶ್ ಸೇರಿದಂತೆ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಗ್ಯಾರಂಟಿ ನ್ಯೂಸ್ ವಾಟ್ಸಾಪ್ ಚಾನೆಲ್ ಫಾಲೋ ಮಾಡಿ: https://whatsapp.com/channel/0029VafyCqRFnSzHn1JWKi1B
ಜೊತೆಯಲ್ಲೇ ಗ್ಯಾರಂಟಿ ನ್ಯೂಸ್ ಸಮುದಾಯವನ್ನು ಸೇರಲು ಈ ಲಿಂಕ್ ಕ್ಲಿಕ್ಕಿಸಿ:https://chat.whatsapp.com/HWayJDSBf9aI06q6jplPgc