ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ ಕಳಚಿ ಬಿದ್ದ ಪ್ರಕರಣದ ತನಿಖೆ ನಡೆಸಲು ತುಂಗಭದ್ರಾ ಅಣೆಕಟ್ಟು ಮಂಡಳಿ ಆರು ಸದಸ್ಯರ ತಾಂತ್ರಿಕ ತಂಡವನ್ನು ರಚನೆ ಮಾಡಿದ್ದು, 15 ದಿನಗಳಲ್ಲಿ ವರದಿ ಸಲ್ಲಿಸುವಂತೆ ಸೂಚನೆ ನೀಡಿದೆ. ದೆಹಲಿಯ ಪರಿಣತ ತಜ್ಞ ಎ.ಕೆ.ಬಜಾಜ್ ನೇತೃತ್ವದಲ್ಲಿ ತಾಂತ್ರಿಕ ಪರಿಶೀಲನಾ ಸಮಿತಿ ರಚನೆ ಮಾಡಲಾಗಿದ್ದು, ಈ ಸಮಿತಿ ಸೆಪ್ಟೆಂಬರ್ 9 ಮತ್ತು 10ರಂದು ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ.
ಅಣೆಕಟ್ಟು ಗೇಟ್ ತಜ್ಞರಾದ ಹರ್ಕೇಶ್ ಕುಮಾರ್, ತಾರಾಪುರಂ ಸುಧಾಕರ್, ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ ಸರ್ಕಾರಗಳ ತಾಂತ್ರಿಕ ಸಲಹಾ ಸಮಿತಿಯ ಪ್ರತಿನಿಧಿಗಳು ಈ ತಂಡದಲ್ಲಿ ಸದಸ್ಯರಾಗಿರುತ್ತಾರೆ. 15 ದಿನದಲ್ಲಿ ತನಿಖಾ ವರದಿ ಸಲ್ಲಿಸಲು ಸೂಚಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.