ತುಂಗಭದ್ರಾ ಅಣೆಕಟ್ಟೆಯನ್ನು ನಿರ್ಬಂಧಿತ ಪ್ರದೇಶವೆಂದು ಘೋಷಿಸಲಾಗಿದ್ದು, ಇಲ್ಲಿ ಸಾರ್ವಜನಿಕರ ಸಂಚಾರಕ್ಕೂ ಅವಕಾಶವಿಲ್ಲ. ಆದರೆ, ಈಗಿಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ಮಾಡಲಾಗಿದೆ. ಕ್ರಸ್ಟ್ ಗೇಟ್ ಆಪರೇಟರ್ ಸಿಸ್ಟಮ್ ಪಕ್ಕದಲ್ಲಿಯೇ ಶೂಟ್ ಮಾಡಲಾಗಿದ್ದು, ಇವರು ಹೊಸಪೇಟೆ ಮೂಲದವರು ಎಂದು ಹೇಳಲಾಗುತ್ತಿದೆ. ಬುಧವಾರ ಬೆಳ್ಳಂಬೆಳಗ್ಗೆ ಪ್ರೀ ವೆಡ್ಡಿಂಗ್ ಶೂಟ್ ನಡೆದಿದ್ದು, ಬಗೆ-ಬಗೆಯ ಭಂಗಿಯಲ್ಲಿ ಅಣೆಕಟ್ಟೆಯ ಮೇಲೆ ವಾಹನಗಳೊಂದಿಗೆ ಫೋಟೋ ಶೂಟ್ ಮತ್ತು ವಿಡಿಯೋ ಶೂಟ್ ಮಾಡಲಾಗಿದೆ. ಅಣೆಕಟ್ಟೆಯ ಮೇಲ್ಬಾಗದಲ್ಲಿಯೇ ಶೂಟ್ ಮಾಡಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ.