ಉತ್ತರ ಪ್ರದೇಶ: ಅಪಾರ್ಟ್ಮೆಂಟ್ವೊಂದರ ಆವರಣದಲಿ ಆಟವಾಡುತ್ತಿದ್ದ ಬಾಲಕಿ ಮೇಲೆ ಜರ್ಮನ್ ಶೆಫರ್ಡ್ ನಾಯಿಯೊಂದು ಡೆಡ್ಲಿ ಅಟ್ಯಾಕ್ ಮಾಡಿದೆ. ಉತ್ತರ ಪ್ರದೇಶದ ಗಾಜಿಯಾಬಾದ್ನಲ್ಲಿ ಘಟನೆ ನಡೆದಿದೆ. ನಾಯಿ ದಾಳಿಯಿಂದ ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದಾಳೆ. ಈ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಗಾಜಿಯಾಬಾದ್ನ ಅಂಜರಾ ಇಂಟಿಗ್ರಿಟಿ ಸೂಸೈಟಿ ಎಂಬ ಅಪಾರ್ಟ್ಮೆಂಟ್ನಲ್ಲಿ ಘಟನೆ ನಡೆದಿದ್ದು, ಸೈಕಲ್ ಆಟವಾಡುತ್ತಿದ್ದ ಆರು ವರ್ಷದ ಬಾಲಕಿ ಮೇಲೆ ನಾಯಿ ಏಕಾಏಕಿ ದಾಳಿ ಮಾಡಿದೆ. ತಕ್ಷಣ ಅಲ್ಲೇ ಇದ್ದ ಬಾಲಕಿಯ ತಾಯಿ ಓಡಿ ಬಂದು ನಾಯಿಯನ್ನು ಓಡಿಸಿದ್ದಾರೆ. ಅಲ್ಲದೇ ಸ್ಥಳದಲ್ಲಿದ್ದ ಸೆಕ್ಯೂರಿಟಿ ಗಾರ್ಡ್ ಆಕೆಯ ಸಹಾಯಕ್ಕೆ ಬರುತ್ತಾರೆ. ಇನ್ನು ಸ್ಥಳದಲ್ಲಿ ಅನೇಕ ಮಕ್ಕಳು ಆಟವಾಡುತ್ತಿರುವುದನ್ನು ಕಾಣಬಹುದಾಗಿದೆ.