ಉತ್ತರ ಪ್ರದೇಶ ಹತ್ರಾಸ್ನ ಭೋಲೆ ಬಾಬ ಸತ್ಸಂಗದಲ್ಲಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ ಸಾವಿನ ಸಂಖ್ಯೆ 121ಕ್ಕೆ ಏರಿಕೆಯಾಗಿದೆ. 28 ಮಂದಿಗೆ ಸ್ಥಿತಿ ಗಂಭೀರವಾಗಿದೆ. ದುರ್ಘಟನ ಸ್ಥಳಕ್ಕೆ ಉತ್ತರ ಪ್ರದೇಶ ಸಿಎಂ ಯೋಗಿ ಅದಿತ್ಯನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಗಾಯಾಳುಗಳು ದಾಖಲಾಗಿರುವ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಉತ್ತರ ಪ್ರದೇಶ ಸರ್ಕಾರ ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ. ಗಾಯಾಳುಗಳ ಕುಟುಂಬಕ್ಕೆ 50 ಸಾವಿರ ಪರಿಹಾರ ಘೋಷಣೆ ಮಾಡಲಾಗಿದೆ.
ಭೋಲೆ ಬಾಬ ಅಲಿಯಾಸ್ ನಾರಾಯಣ ಸಾಕಾರ್ ಹರಿ ನಾಪತ್ತೆಯಾಗಿದ್ದು, ಪೊಲೀಸರು ಹುಡುಕಾಟ ನಡೆಸಿದ್ದಾರೆ. ಕಾರ್ಯಕ್ರಮ ಆಯೋಜಕರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.