ಮಹಾಕುಂಭಮೇಳ ನಡೆಯುವ ಪ್ರದೇಶವನ್ನ ಹೊಸ ಜಿಲ್ಲೆಯನ್ನಾಗಿ ಘೋಷಿಸಿದ ಯುಪಿ ಸರ್ಕಾರ

ಲಕ್ನೋ: ಪ್ರಯಾಗ್‌ರಾಜ್‌ನ ಮಹಾ ಕುಂಭಮೇಳ ನಡೆಯುವ ಪ್ರದೇಶವನ್ನು ಹೊಸ ಜಿಲ್ಲೆಯನ್ನಾಗಿ ಯುಪಿ ಸರ್ಕಾರ ಘೋಷಿಸಿದೆ. 2025ರ ಜನವರಿಯಲ್ಲಿ ನಡೆಯಲಿರುವ ಮಹಾ ಕುಂಭಮೇಳಕ್ಕೂ ಮೊದಲು ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಹೊಸ ಜಿಲ್ಲೆಯನ್ನು ಮಹಾ ಕುಂಭಮೇಳ ಜಿಲ್ಲೆ ಎಂದು ಕರೆಯಲಾಗುತ್ತದೆ. ಮುಂದಿನ ವರ್ಷ ನಡೆಯುವ ಮಹಾ ಕುಂಭಮೇಳವನ್ನು ಸಮರ್ಥವಾಗಿ ನಿರ್ವಹಿಸುವ ಸಲುವಾಗಿ ಈ ನಿರ್ಧಾರ ಮಾಡಲಾಗಿದೆ. ಭಕ್ತಾಧಿಗಳಿಗೆ ಅನುಭವವನ್ನು ಹೆಚ್ಚಿಸುವ ಮತ್ತು ಸಂಪನ್ಮೂಲಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸುವ ಸರ್ಕಾರದ ಬದ್ಧತೆಯನ್ನು ಈ ಕ್ರಮವು ಪ್ರತಿಬಿಂಬಿಸುತ್ತದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. … Continue reading ಮಹಾಕುಂಭಮೇಳ ನಡೆಯುವ ಪ್ರದೇಶವನ್ನ ಹೊಸ ಜಿಲ್ಲೆಯನ್ನಾಗಿ ಘೋಷಿಸಿದ ಯುಪಿ ಸರ್ಕಾರ