ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, ಜ್ಯೂಸ್, ಮಸೂರ ಮತ್ತು ಬ್ರೆಡ್ನಂತಹ ಸಾಮಾನ್ಯವಾಗಿ ಸೇವಿಸುವ ವಸ್ತುಗಳಲ್ಲಿ ಮಾನವ ತ್ಯಾಜ್ಯವನ್ನು ಒಳಗೊಂಡಿರುವ ಆಹಾರ ಕಲಬೆರಕೆ, ಇತ್ತೀಚಿನ ಘಟನೆಗಳನ್ನು ಖಂಡಿಸಿದ್ದಾರೆ. ಈ ಕೃತ್ಯಗಳನ್ನು ಅಸಹ್ಯಕರ ಎಂದು ಟೀಕಿಸಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಇಂತಹ ಆಚರಣೆಗಳನ್ನು ಸಹಿಸಲು ಸಾಧ್ಯವಿಲ್ಲ. ಇದು ಸಾರ್ವಜನಿಕ ಆರೋಗ್ಯಕ್ಕೆ ಗಂಭೀರ ಅಪಾಯವನ್ನು ಉಂಟುಮಾಡುತ್ತದೆ ಎಂದು ಹೇಳಿದ್ದಾರೆ.
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವು ರೆಸ್ಟೋರೆಂಟ್ಗಳು ಮತ್ತು ಡಾಬಾಗಳನ್ನು ಸರಿಯಾಗಿ ಪರಿಶೀಲಿಸುವಂತೆ ಅಧಿಕಾರಿಗಳಿಗೆ ಆದೇಶಿಸಿದ್ದಾರೆ. ಆಹಾರ ಮತ್ತು ಪಾನೀಯ ಮಳಿಗೆಗೆಳ ಆವರಣದಲ್ಲಿ ವ್ಯವಸ್ಥಾಪಕರು ಮತ್ತು ಮಾಲೀಕರ ಹೆಸರನ್ನು ಪ್ರದರ್ಶಿಸಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ.
ಸಿಎಂಒ ಕಚೇರಿಯ ನಿರ್ದೇಶನಗಳ ಪ್ರಕಾರ ಅಡುಗೆಯವರು ಮತ್ತು ಮಾಣಿಗಳು ಕರ್ತವ್ಯದ ಸಮಯದಲ್ಲಿ ಮಾಸ್ಕ್ ಮತ್ತು ಗ್ಲೌಸ್ ಧರಿಸಬೇಕಾಗುತ್ತದೆ. ಹೋಟೆಲ್ಗಳು ಮತ್ತು ರೆಸ್ಟೋರೆಂಟ್ಗಳಿಗೆ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವುದು ಕಡ್ಡಾಯವಾಗಿದೆ. ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರು ಡಾಬಾಗಳು ಅಥವಾ ರೆಸ್ಟೋರೆಂಟ್ಗಳ ಸರಿಯಾದ ತಪಾಸಣೆ ಮತ್ತು ಎಲ್ಲಾ ಉದ್ಯೋಗಿಗಳ ಪೊಲೀಸ್ ಪರಿಶೀಲನೆಗೆ ನಿರ್ದೇಶನಗಳನ್ನು ನೀಡಿದ್ದಾರೆ.
ಆಹಾರ ಮತ್ತು ಪಾನೀಯ ಮಳಿಗೆಗಳಲ್ಲಿ ಮ್ಯಾನೇಜರ್ ಮತ್ತು ಮಾಲೀಕರ ಹೆಸರುಗಳು ಮತ್ತು ವಿಳಾಸಗಳನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕು. ಬಾಣಸಿಗರಾಗಿರಲಿ ಅಥವಾ ಮಾಣಿಯಾಗಿರಲಿ, ಮಾಸ್ಕ್ ಮತ್ತು ಗ್ಲೌಸ್ಗಳನ್ನು ಧರಿಸುವುದು ಕಡ್ಡಾಯವಾಗಿರುತ್ತದೆ. ಹೋಟೆಲ್ ಅಥವಾ ರೆಸ್ಟೋರೆಂಟ್ಗಳಲ್ಲಿ ಸಿಸಿಟಿವಿಗಳನ್ನು ಕಡ್ಡಾಯವಾಗಿ ಅಳವಡಿಸಬೇಕು. ಕಲಬೆರಕೆ ಪತ್ತೆಯಾದರೆ ಮ್ಯಾನೇಜರ್ ಅಥವಾ ಮಾಲೀಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಕಚೇರಿ ತಿಳಿಸಿದೆ.
ಸಿಎಂ ಯೋಗಿ ಆದಿತ್ಯನಾಥ್ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ಹೊಸ ನಿಯಮಾವಳಿಗಳನ್ನು ಪ್ರಕಟಿಸಲಾಗಿದೆ. ದೇಶದ ವಿವಿಧ ಪ್ರದೇಶಗಳಲ್ಲಿ ಆಹಾರ ಕಲಬೆರಕೆಯ ಆತಂಕಕಾರಿ ಘಟನೆಗಳಿಗೆ ಪ್ರತಿಕ್ರಿಯೆಯಾಗಿ, ಸಿಎಂ ಆದಿತ್ಯನಾಥ್ ಅವರು ರಾಜ್ಯದಲ್ಲಿ ಆಹಾರ ಸುರಕ್ಷತಾ ಮಾನದಂಡಗಳನ್ನು ಹೆಚ್ಚಿಸುವ ಉದ್ದೇಶದಿಂದ ಕಟ್ಟುನಿಟ್ಟಿನ ನಿರ್ದೇಶನಗಳನ್ನು ಹೊರಡಿಸಿದ್ದಾರೆ. ಇಂದು ನಡೆದ ಉನ್ನತ ಮಟ್ಟದ ಸಭೆಯಲ್ಲಿ, ಹೋಟೆಲ್ಗಳು, ಡಾಬಾಗಳು ಮತ್ತು ರೆಸ್ಟೋರೆಂಟ್ಗಳು ಸೇರಿದಂತೆ ಎಲ್ಲಾ ಆಹಾರ ಸಂಸ್ಥೆಗಳ ಸಮಗ್ರ ತಪಾಸಣೆಯ ತುರ್ತು ಅಗತ್ಯವನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಒತ್ತಿ ಹೇಳಿದರು.