ಉತ್ತರಪ್ರದೇಶ ಬಿಜೆಪಿ ಸರ್ಕಾರದಲ್ಲಿ ಅಸಮಾಧಾನ ಭುಗಿಲೆದ್ದಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಡಿಸಿಎಂ ಕೇಶವ್ ಪ್ರಸಾದ್ ಮೌರ್ಯ ಸಿಡಿದೆದ್ದಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಆಘಾತಕಾರಿ ಹಿನ್ನಡೆ ಅನುಭವಿಸಿದ ಬೆನ್ನಲ್ಲೇ ಈಗ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ವಿರುದ್ದ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ ಡಿಸಿಎಂ ಕೇಶವ್ ಪ್ರಸಾದ್ ಮೌರ್ಯ. ಲೋಕಸಭೆ ಚುನಾವಣೆ ಮುಗಿದ ಒಂದೂವರೆ ತಿಂಗಳಲ್ಲಿ ಉತ್ತರಪ್ರದೇಶದ ರಾಜಕಾರಣದಲ್ಲಿ ಅಲ್ಲೋಲಕಲ್ಲೋಲ ಸೃಷ್ಟಿಯಾಗಿದೆ. ಇದರ ಬೆನ್ನಲ್ಲೇ ಡಿಸಿಎಂ ಕೇಶವ್ ಪ್ರಸಾದ್ ಮೌರ್ಯ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾರನ್ನಾ ಭೇಟಿಯಾಗಿದ್ದಾರೆ. ಕೆಲವೆಡೆ ಸಿಎಂ ಯೋಗಿ ಆದಿತ್ಯನಾಥ್ ತಲೆದಂಡದ ವದಂತಿಗಳೂ ಸಹಾ ಕೇಳಿ ಬರುತ್ತಿವೆ.