ಉತ್ತರ ಪ್ರದೇಶದ ಬುಲಂದ್ಶಹರ್ನಲ್ಲಿ ಬಸ್ ಮತ್ತು ಟೆಂಪೋ ಡಿಕ್ಕಿ ಹೊಡೆದು ಹತ್ತು ಜನರು ಮೃತಪಟ್ಟಿದ್ದು, 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಟೆಂಪೋದಲ್ಲಿ 25 ಜನರು ಪ್ರಯಾಣಿಸುತ್ತಿದ್ದರು. ಅವರಲ್ಲಿ ಹತ್ತು ಮಂದಿ ಸೇಲಂಪುರ ಪ್ರದೇಶದಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಖಾಸಗಿ ಬಸ್ ಮತ್ತೊಂದು ವಾಹನವನ್ನು ಹಿಂದಿಕ್ಕಲು ಪ್ರಯತ್ನಿಸುವಾಗ ಟೆಂಪೋಗೆ ಡಿಕ್ಕಿ ಹೊಡೆದು ಟೆಂಪೋ ಪಲ್ಟಿಯಾಗಿದೆ.
ಸ್ಥಳೀಯರ ನೆರವಿನಿಂದ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ರವಾನಿಸಲಾಗಿದೆ. ಅಪಘಾತದಲ್ಲಿ ಟೆಂಪೋ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಬಸ್ನ ಮುಂಭಾಗವೂ ಜಖಂಗೊಂಡಿದೆ.ಈ ಘಟನೆ ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದ್ದು, ರಸ್ತೆ ತಡೆ ನಡೆಸಿದರು. ಅಪಘಾತಕ್ಕೆ ಕಾರಣ ಪೊಲೀಸರಿಂದ ಇನ್ನಷ್ಟೇ ತಿಳಿದು ಬರಬೇಕಿದೆ. ತನಿಖೆ ಪ್ರಾರಂಭಿಸಲಾಗಿದೆ.