- ಕ್ಲಾಸ್ ರೂಂನಲ್ಲೆ ಪ್ರಾಂಶುಪಾರರಿಂದ ಶಿಕ್ಷಕಿ ಮೇಲೆ ಹಲ್ಲೆ
- ಶಾಲೆಗೆ ಲೇಟಾಗಿ ಬಂದಿದ್ದರಿಂದ ಶಿಕ್ಷಕಿಗೆ ಥಳಿತ
ಶಾಲೆಯ ಪ್ರಾಂಶುಪಾಲರು ಶಿಕ್ಷಕರೊಬ್ಬರ ಮೇಲೆ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ. ಆಗ್ರಾದ ಪ್ರಾಥಮಿಕ ಶಾಲೆಯೊಂದರಲ್ಲಿ ಈ ಘಟನೆ ಸಂಭವಿಸಿದ್ದು, ಅದರ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಒಂದೇ ದಿನದಲ್ಲಿ ಲಕ್ಷಾಂತರ ವೀಕ್ಷಣೆ ಪಡೆದುಕೊಂಡಿದೆ.
ಶಾಲೆಗೆ ತಡವಾಗಿ ಬಂದಿದ್ದಕ್ಕಾಗಿ ಶಿಕ್ಷಕಿ ಗುಂಜಾ ಚೌಧರಿ ಅವರನ್ನು ಪ್ರಾಂಶುಪಾಲರು ಪ್ರಶ್ನಿಸಿದ್ದಾರೆ. ಬಳಿಕ ಇವರಿಬ್ಬರ ನಡುವೆ ತೀವ್ರ ವಾಗ್ವಾದ ನಡೆದಿದೆ. ಇದರಿಂದ ಕೋಪಕೊಂಡ ಪ್ರಿನ್ಸಿಪಾಲ್ ಬಟ್ಟೆ ಹಿಡಿದೆಳೆದು ಮನಬದ್ದಂತೆ ಥಳಿಸಿದ್ದಾರೆ. ಶಿಕ್ಷಕಿ ಹಾಗೂ ಪ್ರಿನ್ಸಿಪಾಲ್ ನಡುವೆ ಗುದ್ದಾಟ ನಡೆದಿದ್ದು, ಜಗಳದ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ.
ಜಗಳ ನಿಲ್ಲಿಸಲು ಇತರ ಸಿಬ್ಬಂದಿಗಳು ಪ್ರಯತ್ನಿಸುತ್ತಿದ್ದು, ಆದರೆ ಅವರ ಪ್ರಯತ್ನಗಳು ವ್ಯರ್ಥವಾಯಿತು. ಘಟನೆ ಸಂಬಂಧ ಸಿಕಂದರಾ ಪೊಲೀಸ್ ಠಾಣೆಗೆ ಎರಡೂ ಕಡೆಯವರು ಪರಸ್ಪರ ದೂರು ದಾಖಲಿಸಿಕೊಂಡಿದ್ದಾರೆ. ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಪ್ರತಿಕ್ರಿಯಿಸಿದ್ದು, “ಪಾಠ ಕಲಿಸುವ ಶಿಕ್ಷಕರೇ ಈ ರೀತಿಯ ವರ್ತನೆ ತೋರಿದರೆ ಮಕ್ಕಳ ಗತಿಯೇನು”ಎಂದು ಕಾಮೆಂಟ್ ಮಾಡಿದ್ದಾರೆ.