ಕೆಲವೊಬ್ಬರಿಗೆ ಎಲ್ಲಿ ಹೇಗೆ ನಡೆದುಕೊಳ್ಳಬೇಕು, ಯಾವ ರೀತಿ ವರ್ತಿಸಬೇಕು ಎಂಬುದೇ ಗೊತ್ತಿಲ್ಲ, ಹೀಗೆ ಸಾರ್ವಜನಿಕ ಸ್ಥಳಗಳಲ್ಲಿಯೇ ರೊಮ್ಯಾನ್ಸ್ ಮಾಡಿ, ಅಸಭ್ಯವಾಗಿ ನಡೆದುಕೊಂಡು ನೆಟ್ಟಿಗರ ಕೆಂಗಣ್ಣಿಗೆ ಗುರಿಯಾದ ಸುದ್ದಿಗಳನ್ನು ಕೇಳಿರುತ್ತೀರಿ ಅಲ್ವಾ. ಇದೀಗ ಅಂತಹದ್ದೇ ಅಸಹ್ಯ ಕೃತ್ಯವೊಂದು ನಡೆದಿದ್ದು, ಪೋಸ್ಟ್ ಪೋಸ್ಟ್ಮಾರ್ಟಂ ಕೇಂದ್ರದ ಡೀಪ್ ಫ್ರೀಜರ್ ಕೋಣೆಯಲ್ಲಿ ಅಲ್ಲಿನ ಸ್ವಚ್ಛತಾ ಸಿಬ್ಬಂದಿಯೋರ್ವ ಮೃತ ದೇಹಗಳ ನಡುವೆಯೇ ಕಾಲ್ ಗರ್ಲ್ ಜೊತೆ ಬಲವಂತವಾಗಿ ಲೈಂಗಿಕ ಕ್ರಿಯೆ ನಡೆಸಿದ್ದಾನೆ. ಈ ಕುರಿತ ವಿಡಿಯೋವೊಂದು ಇದೀಗ ವೈರಲ್ ಆಗಿದೆ.
ಈ ಘಟನೆ ಉತ್ತರ ಪ್ರದೇಶದ ಹೈಟೆಕ್ ಸಿಟಿ ನೋಯ್ಡಾದಲ್ಲಿ ನಡೆದಿದ್ದು, ಇಲ್ಲಿನ ಸೆಕ್ಟರ್ -94 ನಲ್ಲಿರುವ ಪೋಸ್ಟ್ಮಾರ್ಟಂ ಹೌಸ್ ನ ಡೀಪ್ ಫ್ರೀಜರ್ ಕೋಣೆಯಲ್ಲಿ ಸ್ವಚ್ಛತಾ ಸಿಬ್ಬಂದಿಯೋರ್ವ ಮಹಿಳೆಯೊಂದಿಗೆ ಬಲವಂತವಾಗಿ ಲೈಂಗಿಕ ಕ್ರಿಯೆ ನಡೆಸಿದ್ದಾನೆ. ಇದನ್ನು ಯಾರೋ ವಿಡಿಯೋ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತುಕೊಂಡ ಆರೋಗ್ಯ ಇಲಾಖೆ ಪೊಲೀಸರಿಗೆ ದೂರು ನೀಡಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.