ಡೆಹ್ರಾಡೂನ್: ಬಸ್ಸೊಂದು ಕಂದಕಕ್ಕೆ ಉರುಳಿಬಿದ್ದ ಪರಿಣಾಮ 20 ಮಂದಿ ಸಾವನ್ನಪ್ಪಿರುವ ಘಟನೆ ಉತ್ತರಾಖಂಡದ ಅಲ್ಮೋರಾ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ.
ಬಸ್ ನಲ್ಲಿ 40ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದರು. ಗರ್ವಾಲ್ನಿಂದ ಕುಮೌನ್’ಗೆ ತೆರಳುತ್ತಿದ್ದಾಗ ನಿಯಂತ್ರಣ ತಪ್ಪಿದ ಬಸ್ ಕಂದಕಕ್ಕೆ ಉರುಳಿ ಬಿದ್ದಿದೆ. ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ದೌಡಾಯಿರುವ ರಕ್ಷಣಾ ಪಡೆಗಳು ಸ್ಥಳದಲ್ಲಿ ಕಾರ್ಯಾಚರಣೆ ಆರಂಭಿಸಿದ್ದು, ಗಾಯಾಳುಘಳನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸುತ್ತಿದ್ದಾರೆ. ಘಟನೆಯಲ್ಲಿ 20 ಮಂದಿ ಸಾವನ್ನಪ್ಪಿದ್ದು, ಮೃತಪಟ್ಟವರಲ್ಲಿ ಅಧಿಕರು ಮಕ್ಕಳಾಗಿದ್ದಾರೆಂದು ವರದಿಗಳು ತಿಳಿಸಿವೆ.
ಇದನ್ನು ಓದಿ: ಶೋಭಿತಾ-ನಾಗ ಚೈತನ್ಯ ಮದುವೆ ಈ ಸ್ಥಳದಲ್ಲೇ ನಡೆಯುತ್ತಂತೆ!
ಈ ಅಪಘಾತದಲ್ಲಿ ಬಸ್ ಸಂಪೂರ್ಣ ಜಖಂಗೊಂಡಿದ್ದು, ದಾರಿಹೋಕರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಪಘಾತದ ಬಗ್ಗೆ ಮಾಹಿತಿ ಲಭಿಸಿದ ಕೂಡಲೇ ಎಸ್ಡಿಆರ್ಎಫ್ ಮತ್ತು ಎನ್ಡಿಆರ್ಎಫ್ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ಗಾಯಾಳುಗಳನ್ನು ಬಸ್ನಿಂದ ಹೊರ ತೆಗೆಯಲಾಗುತ್ತಿದೆ. ಆ್ಯಂಬುಲೆನ್ಸ್ ಕೂಡ ಸ್ಥಳದಲ್ಲಿದೆ ಎಂದು ತಿಳಿಸಿದ್ದಾರೆ.
ಇದನ್ನು ಓದಿ: ಟ್ರಂಪ್ v/s ಕಮಲಾ ಮಹಾಸಮರ; ಗೆಲ್ಲೋದು ಯಾರು..?
ಘಟನಗೆ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ರಕ್ಷಣಾ ಕಾರ್ಯಾಚರಣೆಯನ್ನು ಚುರುಕುಗೊಳಿಸುವಂತೆ ಜಿಲ್ಲಾಡಳಿತ ಮಂಡಳಿಗೆ ಸೂಚನೆ ನೀಡಿರುವುದಾಗಿ ತಿಳಿಸಿದ್ದಾರೆ.